ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳ ನಡುವೆ ಏಕೈಕ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೂರನೇ ದಿನದಾಟದಂದು ಭಾರತ ಮಹಿಳಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ತಮ್ಮ ವೃತ್ತಿಜೀವನದ ಮೊಟ್ಟ ಮೊದಲ ಟೆಸ್ಟ್ ಶತಕ ಬಾರಿಸಿದರು. ಭಾರತದ ಎರಡನೇ ಇನ್ನಿಂಗ್ಸ್ನಲ್ಲಿ ಈ ಶತಕದ ಇನ್ನಿಂಗ್ಸ್ ಆಡುವ ಮೂಲಕ ಯಾಸ್ತಿಕಾ, ಲಾರ್ಡ್ಸ್ ಮೈದಾನದಲ್ಲಿ ಟೆಸ್ಟ್ ಶತಕ ಬಾರಿಸಿದ ಮೊಟ್ಟ ಮೊದಲ ಮಹಿಳಾ ಕ್ರಿಕೆಟರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದರು. ಯಾಸ್ತಿಕಾ ಅವರ ಈ ಶತಕದ ಇನ್ನಿಂಗ್ಸ್ನಿಂದಾಗಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ನಲ್ಲಿ 300 ರನ್ಗಳ ಗಡಿ ದಾಟಿದೆ. ಮಾತ್ರವಲ್ಲದೆ ತಂಡದ ಮುನ್ನಡೆ 400 ರನ್ಗಳ ಗಡಿ ದಾಟಿದೆ.
ತಮ್ಮ ಟೆಸ್ಟ್ ವೃತ್ತಿಜೀವನದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಯಸ್ತಿಕಾ ಭಾಟಿಯಾ ಈ ಐತಿಹಾಸಿಕ ಮೈಲಿಗಲ್ಲು ಸಾಧಿಸಿದರು. ಪಂದ್ಯದ ಎರಡನೇ ದಿನದಾಟದಂದು 39 ರನ್ ಬಾರಿಸಿ ಅಜೇಯರಾಗಿ ಹಿಂತಿರುಗಿದ್ದ ಯಸ್ತಿಕಾ ಮೂರನೇ ದಿನದಂದು ತಮ್ಮ ಇನ್ನಿಂಗ್ಸ್ ಮುಂದುವರೆಸಿದರು. ಮೊದಲಿಗೆ ತಮ್ಮ ಟೆಸ್ಟ್ ವೃತ್ತಿಜೀವನದ ಎರಡನೇ ಅರ್ಧಶತಕ ಬಾರಿಸಿದ ಯಾಸ್ತಿಕಾ, ಆ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು.
Published On – 6:53 pm, Sun, 12 July 26
