IND vs ENG: ಲಾರ್ಡ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಜಯ; ಇಂಗ್ಲೆಂಡ್​ಗೆ 270 ರನ್ ಸೋಲು

ಭಾರತ ಹಾಗೂ ಇಂಗ್ಲೆಂಡ್‌ ಮಹಿಳಾ ತಂಡಗಳ ನಡುವೆ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ 270 ರನ್​ಗಳ ದಾಖಲೆಯ ಗೆಲುವು ಸಾಧಿಸಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಿಂದಲೂ ಪಾರುಪತ್ಯ ಮೆರೆದ ಟೀಂ ಇಂಡಿಯಾ ಪಂದ್ಯದ ಕೊನೆಯ ದಿನದ ಮೊದಲ ಸೆಷನ್​ನಲ್ಲಿ ಇಂಗ್ಲೆಂಡ್‌ ತಂಡವನ್ನು 186 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಲಾರ್ಡ್ಸ್‌ನಲ್ಲಿ ನಡೆದ ಮೊಟ್ಟ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಮೊದಲ ತಂಡವೆಂಬ ದಾಖಲೆಯನ್ನು ಬರೆಯಿತು. ಈ ಪಂದ್ಯದಲ್ಲಿ ಗೆಲುವಿಗೆ 457 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ತಂಡದ ಬ್ಯಾಟಿಂಗ್ ವಿಭಾಗ, ಮೊದಲ ಇನ್ನಿಂಗ್ಸ್​ನಂತೆ ಎರಡನೇ ಇನ್ನಿಂಗ್ಸ್​ನಲ್ಲೂ ಕಳಪೆ ಪ್ರದರ್ಶನ ನೀಡಿತು. ಇದರ ಪರಿಣಾಮವಾಗಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿತು ಹಾಗೆಯೇ ಟಿ20 ಸರಣಿ ಸೋಲಿಗೆ ಸೇಡನ್ನು ತೀರಿಸಿಕೊಂಡಿತು.

Source link

Leave a Reply

Your email address will not be published. Required fields are marked *