ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾರಿಂದ ಒಂದೊಳ್ಳೆ ಇನ್ನಿಂಗ್ಸ್ನ ನಿರೀಕ್ಷೆ ಇಡಲಾಗಿತ್ತು. ಏಕೆಂದರೆ ಇಡೀ ವಿಶ್ವಕಪ್ನಲ್ಲಿ ಅಭಿಷೇಕ್ ಶರ್ಮಾ ಒಂದು ಅರ್ಧಶತಕವನ್ನು ಬಾರಿಸಿದ್ದನ್ನು ಬಿಟ್ಟರೆ ಉಳಿದ ಪಂದ್ಯದಲ್ಲಿ ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಾದರೂ ಅಭಿಷೇಕ್ ಅಬ್ಬರಿಸುತ್ತಾರಾ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಭಾರತವನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿತು. ಅದರಂತೆ ಭಾರತದ ಪರ ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಇನ್ನಿಂಗ್ಸ್ ಆರಂಭಿಸಿದರು. ಮೊದಲ ಓವರ್ನಲ್ಲಿ ಭಾರತಕ್ಕೆ ಉತ್ತಮ ಆರಂಭವೇ ಸಿಕ್ಕಿತು. 2ನೇ ಓವರ್ ಕೂಡ ಉತ್ತಮವಾಗಿ ಆರಂಭವಾಯಿತು.
ಮೊದಲ ಓವರ್ನಲ್ಲಿ ಸಂಜು ಸ್ಯಾಮ್ಸನ್ ಎರಡು ದೊಡ್ಡ ಹೊಡೆತಗಳನ್ನು ಬಾರಿಸಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಇನ್ನೊಂದು ತುದಿಯಲ್ಲಿದ್ದ ಅಭಿಷೇಕ್, ಇಂಗ್ಲಿಷ್ ವೇಗಿ ಜೋಫ್ರಾ ಆರ್ಚರ್ ಎಸೆದ ಮೊದಲ ಓವರ್ನ ಕೊನೆಯ ಎಸೆತದಲ್ಲಿ ಒಂದೇ ಒಂದು ರನ್ ಗಳಿಸುವ ಮೂಲಕ ತಮ್ಮ ಖಾತೆಯನ್ನು ತೆರೆದರು.
ವಿಲ್ ಜ್ಯಾಕ್ಸ್ ಎಸೆದ ಎರಡನೇ ಓವರ್ನಲ್ಲಿಯೂ ಭರವಸೆಯ ಬ್ಯಾಟಿಂಗ್ ಮುಂದುವರೆಸಿದ ಅಭಿಷೇಕ್ ಎರಡು ಬೌಂಡರಿಗಳನ್ನು ಬಾರಿಸಿ ಅಭಿಮಾನಿಗಳಿಂದ ಚಪ್ಪಾಳೆಯನ್ನು ಗಿಟ್ಟಿಸಿಕೊಂಡರು. ಆದರೆ ಭಾರತದ ಮೊತ್ತ 20 ರನ್ಗಳಿದ್ದಾಗ ಆಘಾತ ಎದುರಾಯಿತು. ದೊಡ್ಡ ಹೊಡೆತವನ್ನು ಆಡುವ ಯತ್ನದಲ್ಲಿ ಅಭಿಷೇಕ್ ಶರ್ಮಾ ಮಿಡ್ ವಿಕೆಟ್ ದಿಕ್ಕಿನಲ್ಲಿ ಸಾಲ್ಟ್ಗೆ ಕ್ಯಾಚ್ ನೀಡಿದರು.
ಅಭಿಷೇಕ್ ಔಟಾದ ಬಳಿಕ ಕ್ರೀಸ್ಗೆ ಬಂದ ಇಶಾನ್ ಕಿಶನ್, ಸಂಜು ಸ್ಯಾಮ್ಸನ್ ಜೊತೆಗೂಡಿ ತಂಡವನ್ನು 100 ರನ್ಗಳ ಗಡಿ ದಾಟಿಸಿದ್ದಾರೆ. ಆರಂಭದಲ್ಲೇ ಸಿಕ್ಕ ಜೀವದಾನವನ್ನು ಸದುಪಯೋಗಪಡಿಸಿಕೊಂಡ ಸಂಜು ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದ್ದಾರೆ.
