ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾರತ ಹಾಗೂ ಇಂಗ್ಲೆಂಡ್ ವನಿತಾ ತಂಡಗಳ ನಡುವೆ ಮೊಟ್ಟ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ನಲ್ಲಿ 285 ರನ್ ಕಲೆಹಾಕಿತು. ಆ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಆತಿಥೇಯ ಇಂಗ್ಲೆಂಡ್ ತಂಡ ಪಂದ್ಯದ ಎರಡನೇ ದಿನದ ಎರಡನೇ ಸೆಷನ್ನಲ್ಲಿಯೇ ತನ್ನೇಲ್ಲ ವಿಕೆಟ್ ಕಳೆದುಕೊಂಡು 170 ರನ್ ಕಲೆಹಾಕಿತು. ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್ನಲ್ಲಿ 115 ರನ್ಗಳ ಮುನ್ನಡೆ ಪಡೆದುಕೊಂಡಿದೆ. ಇಂಗ್ಲೆಂಡ್ ಪರ ಆಮಿ ಜೋನ್ಸ್ 52 ರನ್ಗಳ ಇನ್ನಿಂಗ್ಸ್ ಆಡಿದರೆ, ನ್ಯಾಟ್ ಸಿವರ್-ಬ್ರಂಟ್ 44 ರನ್ಗಳ ಕಾಣಿಕೆ ನೀಡಿದರು. ಇತ್ತ ಟೀಂ ಇಂಡಿಯಾ ಪರ ಬೌಲಿಂಗ್ನಲ್ಲಿ ಮಿಂಚಿದ ಕ್ರಾಂತಿ ಗೌಡ್ 5 ವಿಕೆಟ್ಗಳ ಗೊಂಚಲು ಪಡೆದರು.