ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಬ್ರಿಸ್ಟಲ್ನ ಕೌಂಟಿ ಮೈದಾನದಲ್ಲಿ ನಡೆಯುತ್ತಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಆದರೆ ಸರಣಿಯ ಕಳೆದೆರಡು ಪಂದ್ಯಗಳಂತೆ ಈ ಪಂದ್ಯದಲ್ಲೂ ಟೀಂ ಇಂಡಿಯಾ ಕಳಪೆ ಆರಂಭವನ್ನು ಪಡೆದುಕೊಂಡಿದೆ (PC-PTI).
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಸತತ ಮೂರನೇ ಪಂದ್ಯದಲ್ಲೂ ರನ್ ಗಳಿಸುವಲ್ಲಿ ಎಡವಿದ್ದಾರೆ. ಈ ಮೂಲಕ ವೈಭವ್ಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದವರಿಗೆ ವೈಭವ್ ನಿರಾಸೆಗೊಳಿಸಿದ್ದಾರೆ (PC-PTI).
ಸಂಜು ಸ್ಯಾಮ್ಸನ್ ವೈಫಲ್ಯದಿಂದಾಗಿ ವೈಭವ್ ಸೂರ್ಯವಂಶಿಗೆ ಭಾರತ ತಂಡದಲ್ಲಿ ಆಡುವ ಅವಕಾಶ ಸಿಕ್ಕಿದೆ. ಆದರೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವೈಭವ್ ಎಡವಿದ್ದಾರೆ. ಇಂಗ್ಲೆಂಡ್ ಪಿಚ್ಗಳನ್ನು ಅರಿಯುವ ಕೆಲಸವನ್ನೇ ಮಾಡದ ವೈಭವ್ ಸತತ ಮೂರನೇ ಪಂದ್ಯದಲ್ಲೂ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿರುವುದು ಆಯ್ಕೆ ಮಂಡಳಿಯನ್ನು ಅಸಮಾಧಾನಗೊಳ್ಳುವಂತೆ ಮಾಡಿರುವುದರಲ್ಲಿ ಸುಳ್ಳಿಲ್ಲ (PC-PTI).
ಈ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ವೈಭವ್ 10 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಸಹಿತ 14 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಮೂರನೇ ಟಿ20 ಪಂದ್ಯದಲ್ಲಿ 5 ಎಸೆತಗಳನ್ನು ಎದುರಿಸಿದ್ದ ವೈಭವ್ 2 ಸಿಕ್ಸರ್ ಸಹಿತ 13 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡಿದ್ದರು (PC-PTI).
ಮೊದಲ ಎರಡು ಪಂದ್ಯಗಳಲ್ಲಿ ವಿಫಲರಾಗಿದ್ದ ವೈಭವ್ ಮೂರನೇ ಟಿ20 ಪಂದ್ಯದಲ್ಲಿ ಅಬ್ಬರಿಸುತ್ತಾರೆ ಎಂದು ಎಲ್ಲರೂ ಕಾದು ಕುಳಿತಿದ್ದರು. ಆದರೆ ಈ ಪಂದ್ಯದಲ್ಲೂ ವೈಭವ್ ನಿರಾಶೆ ಮೂಡಿಸಿದರು. ಈ ಪಂದ್ಯದಲ್ಲಿ 10 ಎಸೆತಗಳನ್ನು ಎದುರಿಸಿದ ವೈಭವ್ 15 ರನ್ ಬಾರಿಸಿ ಔಟಾದರು. ಗಮನಿಸಬೇಕಾದ ಸಂಗತಿಯೆಂದರೆ ಈ ಮೂರು ಪಂದ್ಯಗಳಲ್ಲೂ ವೈಭವ್ ಅವರ ವಿಕೆಟ್ ಪಡೆದಿದ್ದು, ಜೋಪ್ರಾ ಆರ್ಚರ್ (PC-PTI).




