Headlines

IND vs ENG: 341 ರನ್​ಗಳಿಗೆ ಡಿಕ್ಲೇರ್ ಘೋಷಿಸಿದ ಭಾರತ; ಇಂಗ್ಲೆಂಡ್ ಗೆಲುವಿಗೆ 456 ರನ್ ಗುರಿ

IND vs ENG: 341 ರನ್​ಗಳಿಗೆ ಡಿಕ್ಲೇರ್ ಘೋಷಿಸಿದ ಭಾರತ; ಇಂಗ್ಲೆಂಡ್ ಗೆಲುವಿಗೆ 456 ರನ್ ಗುರಿ

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ತನ್ನ ಎರಡನೇ ಇನ್ನಿಂಗ್ಸ್​ ಅನ್ನು 341 ರನ್​​ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಆತಿಥೇಯ ಇಂಗ್ಲೆಂಡ್‌ ಮಹಿಳಾ ತಂಡದ ಗೆಲುವಿಗೆ 457 ರನ್​ಗಳ ಬೃಹತ್ ಗುರಿ ನೀಡಿದೆ. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತದ ಪರ ಯಾಸ್ತಿಕಾ ಭಾಟಿಯಾ ಸ್ಮರಣೀಯ ಶತಕ ಸಿಡಿಸಿದರೆ, ಉಪನಾಯಕಿ ಸ್ಮೃತಿ ಮಂಧಾನ ಹಾಗೂ ವಿಕೆಟ್‌ಕೀಪರ್ ರಿಚಾ ಘೋಷ್ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇತ್ತ ಇಂಗ್ಲೆಂಡ್‌ ಪರ ಸೋಫಿ ಎಕ್ಲೆಸ್ಟೋನ್ ಸತತ ಎರಡನೇ ಇನ್ನಿಂಗ್ಸ್​ನಲ್ಲೂ ಐದು ವಿಕೆಟ್​ಗಳ ಗೊಂಚಲು ಪಡೆದರು.

ಮೊದಲ ಇನ್ನಿಂಗ್ಸ್​ನಲ್ಲಿ 285 ರನ್​ಗಳಿಗೆ ಆಲೌಟ್ ಆಗಿದ್ದ ಟೀಂ ಇಂಡಿಯಾ, ಆತಿಥೇಯ ಇಂಗ್ಲೆಂಡ್‌ ತಂಡವನ್ನು ಮೊದಲ ಇನ್ನಿಂಗ್ಸ್​ನಲ್ಲಿ 170 ರನ್​​ಗಳಿಗೆ ಕಟ್ಟಿಹಾಕಿತು. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 115 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾಕ್ಕೆ ಮೊದಲ ವಿಕೆಟ್​ಗೆ 88 ರನ್​ಗಳ ಜೊತೆಯಾಟ ಸಿಕ್ಕಿತು. ಆರಂಭಿಕ ಆಟಗಾರ್ತಿ ಶಫಾಲಿ 33 ರನ್​ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಈ ಜೊತೆಯಾಟ ಮುರಿದುಬಿತ್ತು. ಇದಾದ ಬಳಿಕ ಜೊತೆಯಾದ ಸ್ಮೃತಿ ಹಾಗೂ ಯಾಸ್ತಿಕಾ ಎರಡನೇ ವಿಕೆಟ್‌ಗೆ 73 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಇದೇ ವೇಳೆ ಸ್ಮೃತಿ ಸತತ ಎರಡನೇ ಇನ್ನಿಂಗ್ಸ್​ನಲ್ಲೂ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಆದಾಗ್ಯೂ ಎರಡನೇ ಇನ್ನಿಂಗ್ಸ್​ನಲ್ಲೂ ಶತಕ ವಂಚಿತರಾದ ಸ್ಮೃತಿ 70 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

Source link

Leave a Reply

Your email address will not be published. Required fields are marked *