ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಪೂರ್ಣ 50 ಓವರ್ಗಳನ್ನು ಆಡಲು ಸಾಧ್ಯವಾಗದೆ 47.5 ಓವರ್ಗಳಲ್ಲಿ 258 ರನ್ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಪವರ್ ಪ್ಲೇ ಮುಗಿಯುವುದಕ್ಕೂ ಮುನ್ನವೇ ಆಘಾತ ಎದುರಾಯಿತು (PC-Cricbuzz).
ಟೀಂ ಇಂಡಿಯಾದ ಇಬ್ಬರು ಅನುಭವಿ ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ಎಡವಿದ್ದಾರೆ. ಅದರಲ್ಲೂ ಬಹಳ ದಿನಗಳ ಬಳಿಕ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದ ಕೊಹ್ಲಿ ಕೇವಲ 5 ರನ್ ಕಲೆಹಾಕಲಷ್ಟೇ ಶಕ್ತರಾದರು (PC-PTI).
ಶುಭ್ಮನ್ ಗಿಲ್ ಜೊತೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ಗೆ ಮೊದಲಿನಿಂದಲೂ ಮುಕ್ತವಾಗಿ ರನ್ ಗಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ರೋಹಿತ್ ಬರೋಬ್ಬರಿ 21 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ ಕೇವಲ 11 ರನ್ ಕಲೆಹಾಕಲಷ್ಟೇ ಶಕ್ತರಾದರು. ಸ್ಯಾಮ್ ಕರನ್ ಅವರ ಬೌಲಿಂಗ್ನಲ್ಲಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ರೋಹಿತ್ ಕ್ಯಾಚ್ ನೀಡಿದರು (PC-PTI).
ರೋಹಿತ್ ವಿಕೆಟ್ ಪತನದ ಬಳಿಕ ಬಂದ ವಿರಾಟ್ ಕೊಹ್ಲಿ ಆತ್ಮವಿಶ್ವಾಸದಲ್ಲಿ ಕಾಣುತ್ತಿದ್ದರು. ಅದರಂತೆ ಕೊಹ್ಲಿ ಜೋಪ್ರಾ ಆರ್ಚರ್ ಅವರ ಬೌಲಿಂಗ್ನಲ್ಲಿ ಅದ್ಭುತ ಬೌಂಡರಿ ಬಾರಿಸಿ ಅಬ್ಬರಿಸುವ ಸುಳಿವನ್ನು ನೀಡಿದರು. ಆದರೆ ಆರ್ಚರ್ ಬೌಲ್ ಮಾಡಿದ 9ನೇ ಓವರ್ನ ಎರಡನೇ ಎಸೆತದಲ್ಲಿ ಕೊಹ್ಲಿ ಎಲ್ಬಿಡಬ್ಲ್ಯೂ ಆಗುವ ಮೂಲಕ ತಮ್ಮ ವಿಕೆಟ್ ಒಪ್ಪಿಸಿದರು (PC-PTI).
ಈ ಇಬ್ಬರು ಅನುಭವಿ ಆಟಗಾರರು ಕೇವಲ 5 ರನ್ಗಳ ಅಂತರದಲ್ಲಿ ತಮ್ಮ ವಿಕೆಟ್ಗಳನ್ನು ಒಪ್ಪಿಸಿದ್ದು ಟೀಂ ಇಂಡಿಯಾವನ್ನು ಆಘಾತಕ್ಕೀಡು ಮಾಡಿದೆ. ಇಂಗ್ಲೆಂಡ್ ನೀಡಿರುವ ಈ ಗುರಿ ಬೆನ್ನಟ್ಟಲು ಇದೀಗ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಪಿಚ್ನಲ್ಲಿ ನೆಲೆ ನಿಂತು ದೊಡ್ಡ ಇನ್ನಿಂಗ್ಸ್ ಆಡಬೇಕಿದೆ (PC-PTI).




