
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್‌ಗೆ ಅರ್ಹತೆ ಪಡೆಯುವುದಲ್ಲದೆ ಅಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ವಿಶ್ವಕಪ್ ಸೆಮಿಫೈನಲ್ ಹಣಾಹಣಿ ಇದಾಗಿದೆ. 2022 ರ ಟಿ20 ವಿಶ್ವಕಪ್‌ನಲ್ಲಿನ ಮೊದಲ ಸೆಮಿಫೈನಲ್‌ನಲ್ಲಿ ಮುಖಾಮುಖಿಯಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಗೆದ್ದರೆ, 2024 ರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಿದ್ದವು. ಅಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಇದೀಗ ಈ ಪಂದ್ಯದಲ್ಲಿ ಗೆದ್ದ ತಂಡವು ಮೇಲುಗೈ ಸಾಧಿಸಲಿದೆ.