ಎರಡು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಿದ್ದ ಟೀಂ ಇಂಡಿಯಾ, ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದು ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಳ್ಳಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಅಲ್ಲಿ ನಡೆದಿದ್ದ ಬೇರೆ. ವಿಶ್ವ ಚಾಂಪಿಯನ್ಗಳೆಂಬ ಅಹಂಕಾರವನ್ನು ಮೈದುಂಬಿಸಿಕೊಂಡಿದ್ದ ಟೀಂ ಇಂಡಿಯಾಕ್ಕೆ ಕ್ರಿಕೆಟ್ ಶಿಶು ಐರ್ಲೆಂಡ್ ಎಂದಿಗೂ ಮರೆಯದ ಮರ್ಮಾಘಾತ ನೀಡಿದೆ. ಮೊದಲ ಟಿ20 ಪಂದ್ಯವನ್ನು 34 ರನ್ಗಳಿಂದ ಗೆದ್ದುಕೊಂಡಿದ್ದ ಐರ್ಲೆಂಡ್ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಕ್ರಿಕೆಟ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಟೀಂ ಇಂಡಿಯಾ ವಿರುದ್ಧ ಟಿ20 ಸರಣಿಯನ್ನು ಗೆದ್ದುಕೊಂಡಿದ್ದಲ್ಲದೆ ಕ್ಲೀನ್ ಸ್ವೀಪ್ ಮಾಡಿದ ದಾಖಲೆಯನ್ನು ನಿರ್ಮಿಸಿತು.
