ಈ ತಿಂಗಳ ಕೊನೆಯಲ್ಲಿ ಎರಡು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ, ಐರ್ಲೆಂಡ್ ಪ್ರವಾಸ ಮಾಡಲಿದೆ. ಜೂನ್ 26 ಮತ್ತು 28 ರಂದು ನಡೆಯಲಿರುವ ಈ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಆದರೆ ಈ ಪ್ರವಾಸಕ್ಕೆ ತಂಡ ಪ್ರಯಾಣ ಬೆಳೆಸುವ ಮುನ್ನವೇ ತಂಡದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಈ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ (PC-PTI).
2026 ರ ಐಪಿಎಲ್ ಸಮಯದಲ್ಲಿ ವರುಣ್ ಚಕ್ರವರ್ತಿ ಎಡಗಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅಂದಿನಿಂದ ವರುಣ್ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ ಸೆಂಟರ್ನಲ್ಲಿ ರಿಹ್ಯಾಬ್ಗೆ ಒಳಗಾಗಿದ್ದಾರೆ. ಈ ಸರಣಿ ಆರಂಭಕ್ಕೂ ಮುನ್ನ ವರುಣ್ ಚೇತರಿಸಿಕೊಳ್ಳುವ ಭರವಸೆಯಿಂದ ಈ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಂಪೂರ್ಣವಾಗಿ ಫಿಟ್ ಆಗದ ವರುಣ್ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ (PC-PTI).
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ತಂಡವನ್ನು ಘೋಷಿಸುವ ಸಂದರ್ಭದಲ್ಲಿ ವರುಣ್ ಚಕ್ರವರ್ತಿಯ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ, ಎಡಗಾಲಿನ ಗಾಯಕ್ಕೆ ತುತ್ತಾಗಿದ್ದ ವರುಣ್ ಚಕ್ರವರ್ತಿ ಚೇತರಿಕೆಯ ಅಂತಿಮ ಹಂತದಲ್ಲಿದ್ದಾರೆ. ಅದಕ್ಕಾಗಿಯೇ ಅವರನ್ನು ಐರ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಕೈಬಿಡಲಾಗಿದೆ ಎಂದಿದೆ (PC-PTI).
ವರುಣ್ ಚಕ್ರವರ್ತಿ ಇದುವರೆಗೆ ಟೀಂ ಇಂಡಿಯಾ ಪರ 45 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 73 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಸ್ವರೂಪದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿರುವುದು ಇದುವರೆಗಿನ ಅವರ ಅತ್ಯುತ್ತಮ ಪ್ರದರ್ಶನವಾಗಿದೆ (PC-PTI).
ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷ್ದೀಪ್ ಸಿಂಗ್, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ (PC-PTI).




