Headlines

IND vs IRE: ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ – Kannada News | Team India arrived in Belfast ahead of the Ireland T20I series

ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ ಎರಡು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್​ಗೆ ತೆರಳಿದೆ. ಇಡೀ ತಂಡ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಐರ್ಲೆಂಡ್‌ನ ಡಬ್ಲಿನ್ ತಲುಪಿದೆ. ವಿಮಾನ ನಿಲ್ದಾಣ ತಲುಪಿದ ಆಟಗಾರರಿಗೆ ಅಲ್ಲಿನ ಆಡಳಿತ ಮಂಡಳಿಯು ಭವ್ಯ ಸ್ವಾಗತ ನೀಡಿತು. ಈ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಮೂಲಕ ಯುವ ಆಟಗಾರರನ್ನು ಪರೀಕ್ಷಿಸಲು ಆಯ್ಕೆದಾರರು ಈ ಸರಣಿಯನ್ನು ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ.

ಐರ್ಲೆಂಡ್ ಸರಣಿಯ ನಂತರ, ಭಾರತ ತಂಡ ಜುಲೈ 1 ರಿಂದ 11 ರವರೆಗೆ ಐದು ಪಂದ್ಯಗಳ ಟಿ20 ಸರಣಿಗಾಗಿ ನೇರವಾಗಿ ಇಂಗ್ಲೆಂಡ್‌ಗೆ ತೆರಳಲಿದೆ. ನಂತರ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ವೈಭವ್ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ, ಅಂತಿಮ ತಂಡಕ್ಕೆ ಸ್ಥಾನ ಪಡೆಯಲು ಅವರು ಐರ್ಲೆಂಡ್ ವಿರುದ್ಧದ ಎರಡೂ ಪಂದ್ಯಗಳಲ್ಲಿ ಅಬ್ಬರಿಸಬೇಕಾಗಿದೆ.

ಎರಡು ಟಿ20 ಪಂದ್ಯಗಳ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ: ಜೂನ್ 26
  • ಎರಡನೇ ಟಿ20ಐ: ಜೂನ್ 28

ಟಿ20 ಸರಣಿಗೆ ಟೀಂ ಇಂಡಿಯಾ: ಶ್ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ವೈಭವ್ ಸೂರ್ಯವಂಶಿ, ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಸಿದ್ಧ್ ಕೃಷ್ಣ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *