ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಟಿ20 ವಿಶ್ವಕಪ್ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ 17 ರನ್ಗಳ ಗೆಲುವು ದಾಖಲಿಸಿ ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದವರೆಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಶಿವಂ ದುಬೆ ಅವರ ಅರ್ಧಶತಕದ ನೆರವಿನಿಂದ 193 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡರೂ ಭಾರತದ ಬೌಲರ್ಗಳ ಎದುರು ಹೋರಾಟದ ಪ್ರದರ್ಶನ ನೀಡಿ 176 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
