2026 ರ ಟಿ20 ವಿಶ್ವಕಪ್ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಟೀಂ ಇಂಡಿಯಾ ಇದೀಗ ತನ್ನ ಕೊನೆಯ ಲೀಗ್ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಆಡುತ್ತಿದೆ. ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಭಾರತ ಅದ್ಭುತ ಗೆಲುವುಗಳನ್ನು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್ಎ ಮತ್ತು ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು ಸೋಲಿಸಿದ ಭಾರತ ತಂಡವು ಮೂರನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿ ಸೂಪರ್ -8 ಹಂತಕ್ಕೆ ಟಿಕೆಟ್ ಖಚಿತ ಪಡಿಸಿಕೊಂಡಿತ್ತು. ಇದೀಗ ಸೂಪರ್ -8 ಸುತ್ತಿಗೂ ಮುನ್ನ ನೆದರ್ಲ್ಯಾಂಡ್ಸ್ ವಿರುದ್ಧ ಗುಂಪು ಹಂತದ ಕೊನೆಯ ಪಂದ್ಯವನ್ನು ಆಡುತ್ತಿರುವ ಸೂರ್ಯಕುಮಾರ್ ಪಡೆ, ಮುಂದಿನ ಸುತ್ತಿಗೆ ತಯಾರಿಯಾಗಿ ಈ ಪಂದ್ಯವನ್ನು ನೋಡುತ್ತಿದೆ.
ಟಾಸ್ ಗೆದ್ದ ಭಾರತ
ಈ ವಿಶ್ವಕಪ್ನಲ್ಲಿ ಇದೇ ಮೊದಲ ಬಾರಿಗೆ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್, ನೆದರ್ಲ್ಯಾಂಡ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಬಳಿಕ ತಂಡದ ಆಡುವ ಹನ್ನೊಂದರ ಬಳಗದ ಬಗ್ಗೆ ಮಾಹಿತಿ ನೀಡಿದ ನಾಯಕ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಿರುವುದಾಗಿ ಘೋಷಿಸಿದರು. ಅದರಂತೆ ಕುಲ್ದೀಪ್ ಯಾದವ್ ಬದಲಿಗೆ ಅರ್ಶ್ದೀಪ್ ಸಿಂಗ್ ತಂಡಕ್ಕೆ ಮರಳಿದ್ದು, ಅಕ್ಷರ್ ಪಟೇಲ್ ಬದಲಿಗೆ ವಾಷಿಂಗ್ಟನ್ ಸುಂದರ್ ಆಡುತ್ತಿದ್ದಾರೆ.
ಉಭಯ ತಂಡಗಳು
ಭಾರತ ತಂಡ: ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ನೆದರ್ಲ್ಯಾಂಡ್ಸ್: ಮೈಕೆಲ್ ಲೆವಿಟ್, ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೇಡೆ, ಕಾಲಿನ್ ಅಕರ್ಮನ್, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಜ್ಯಾಕ್ ಲಿಯಾನ್-ಕ್ಯಾಚೆಟ್, ನೋಹ್ ಕ್ರೂಸ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ಕೈಲ್ ಕ್ಲೈನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
