IND vs NZ: ಕೊಹ್ಲಿ ಹೋರಾಟ ವ್ಯರ್ಥ; ಏಕದಿನ ಸರಣಿ ಸೋತ ಟೀಂ ಇಂಡಿಯಾ – Kannada News | NZ Makes History: Beats India 2 1 in ODI Series at Indore! First Win in India

ಇಂದೋರ್‌ನ ಹೊಳ್ಕರ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ತಂಡವನ್ನು 41 ರನ್​ಗಳಿಂದ ಸೋಲಿಸಿದ ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇದರೊಂದಿಗೆ ಭಾರತದ ನೆಲದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿರುವ ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಇದೀಗ ಮೊದಲ ಬಾರಿಗೆ ಭಾರತೀಯ ನೆಲದಲ್ಲಿ ಏಕದಿನ ಸರಣಿಯನ್ನು ಗೆದ್ದಿದೆ. ಡ್ಯಾರಿಲ್ ಮಿಚೆಲ್ ಅವರ ಸತತ ಎರಡನೇ ಶತಕ ಮತ್ತು ಗ್ಲೆನ್ ಫಿಲಿಪ್ಸ್ ಅವರ ಮೊದಲ ಶತಕದ ಸಹಾಯದಿಂದ ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್ 337 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪ್ರಮುಖ ಬ್ಯಾಟ್ಸ್‌ಮನ್​ಗಳ ವೈಫಲ್ಯದಿಂದಾಗಿ ಸೋಲಿಗೆ ಕೊರಳೊಡ್ಡಿತು. ತಂಡದ ಪರ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನೀಡಿದರಾದರೂ, ಅವರಿಗೆ ಪ್ರಮುಖ ಬ್ಯಾಟ್ಸ್‌ಮನ್​ಗಳು ಸಾಥ್ ನೀಡಲಿಲ್ಲ. ಹೀಗಾಗಿ ತಂಡಕ್ಕೆ ಸರಣಿ ಸೋಲಿನ ಆಘಾತ ಎದುರಾಯಿತು.

Published On – 9:42 pm, Sun, 18 January 26

Source link

Leave a Reply

Your email address will not be published. Required fields are marked *