IND vs NZ: ಭಾರತ- ನ್ಯೂಜಿಲೆಂಡ್ ಫೈನಲ್ ಕಾಳಗ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ?

IND vs NZ: ಭಾರತ- ನ್ಯೂಜಿಲೆಂಡ್ ಫೈನಲ್ ಕಾಳಗ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ?

2026 ರ ಟಿ20 ವಿಶ್ವಕಪ್ ಫೈನಲ್ (T20 World Cup 2026 Final) ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿದೆ. ಈ ಹೈವೋಲ್ಟೇಜ್ ಕದನವನ್ನು ವೀಕ್ಷಿಸಲುನ ಅಭಿಮಾನಿಗಳು ಕೂಡ ಕಾತುರದಿಂದ ಕಾದುಕುಳಿತಿದ್ದಾರೆ. ಆರಂಭದಿಂದಲೂ ಪ್ರಶಸ್ತಿ ಸ್ಪರ್ಧಿ ಎಂದು ಪರಿಗಣಿಸಲಾಗಿರುವ ಆತಿಥೇಯ ಟೀಂ ಇಂಡಿಯಾ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದರೆ, ಇತ್ತ ನ್ಯೂಜಿಲೆಂಡ್, ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಕಪಕ್ಷೀಯವಾಗಿ ಸೋಲಿಸಿ ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಫೈನಲ್ ಪಂದ್ಯದ ಮತ್ತೊಂದು ವಿಶೇಷತೆ ಏನೆಂದರೆ ಭಾರತ ಹಾಗೂ ಕಿವೀಸ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್​ನಲ್ಲಿ ಮುಖಾಮುಖಿಯಾಗುತ್ತಿವೆ. ಹೀಗಾಗಿ ಯಾವ ತಂಡ ಫೈನಲ್ ಕಾಳಗದಲ್ಲಿ ಮೇಲುಗೈ ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಅಂತಿಮ ಪಂದ್ಯವು ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ ಗಂಟೆಗೆ ಪ್ರಾರಂಭವಾಗುತ್ತದೆ?

ವಿಶ್ವಕಪ್ ಫೈನಲ್ ಪಂದ್ಯ ಮಾರ್ಚ್ 8 ರ ಭಾನುವಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಯಾವ ಟಿವಿ ಚಾನೆಲ್‌ನಲ್ಲಿ ವೀಕ್ಷಿಸಬಹುದು?

ಈ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯ OTT ಯಲ್ಲಿ ಎಲ್ಲಿ ವೀಕ್ಷಿಸಬಹುದು?

ಇಡೀ ಟಿ20 ವಿಶ್ವಕಪ್‌ನಂತೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್‌ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಇರುತ್ತದೆ.

IND vs ENG: 65 ಕೋಟಿಗೂ ಅಧಿಕ; ವಿಶ್ವ ದಾಖಲೆ ಬರೆದ ಭಾರತ- ಇಂಗ್ಲೆಂಡ್ ಪಂದ್ಯ

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.

ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಇಶ್ ಸೋಧಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ, ಜೇಮ್ಸ್ ನೀಶಮ್, ಮ್ಯಾಟ್ ಹೆನ್ರಿ, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *