ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲಿ ರನ್ಗಾಗಿ ಪರದಾಡಿದರೂ, ಆ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದರು.
