ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್ನಲ್ಲಿ (T20 World Cup 2026) ಭಾರತ ಹಾಗೂ ಪಾಕಿಸ್ತಾನ (India vs Pakistan) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ, ಭಾರತದ ಕರಾರುವಕ್ಕಾದ ದಾಳಿಗೆ ಕಕ್ಕಾಬಿಕ್ಕಿಯಾಗಿ ಪೂರ್ಣ 20 ಓವರ್ಗಳನ್ನು ಆಡಲಾಗದೆ 114 ರನ್ಗಳಿಗೆ ಆಲೌಟ್ ಆಯಿತು.