ಬರ್ಮಿಂಗ್ಹ್ಯಾಮ್ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಪೂರ್ಣ 20 ಓವರ್ಗಳನ್ನು ಆಡಲು ಸಾಧ್ಯವಾಗದೆ 106 ರನ್ಗಳಿಗೆ ಆಲೌಟ್ ಆಗುವ ಮೂಲಕ 64 ರನ್ಗಳ ಈ ಹೀನಾಯ ಸೋಲು ಕಂಡಿತು.