Headlines

IND vs SA: ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ಮಣಿಸಿದ ಟೀಂ ಇಂಡಿಯಾ – Kannada News | India Dominates South Africa in T20 World Cup Warm Up, Wins by 30 Runs

ನವಿ ಮುಂಬೈನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಭಾರತ 30 ರನ್​ಗಳ ಅಮೋಘ ಜಯ ಸಾಧಿಸುವ ಮೂಲಕ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಬರೋಬ್ಬರಿ 241 ರನ್ ಕಲೆಹಾಕಿತು. ತಂಡದ ಪರ ಆಡಿದ ಎಲ್ಲಾ ಬ್ಯಾಟ್ಸ್‌ಮನ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೂಡ ಉತ್ತಮ ಹೋರಾಟ ನೀಡಿತ್ತಾದರೂ ಗುರಿ ಬೆನ್ನಟ್ಟಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಆಫ್ರಿಕಾ ತಂಡ 210 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಭಾರತದ ಪರ ಅಭಿಷೇಕ್ ಶರ್ಮಾ ಜೊತೆ ಇಶಾನ್ ಕಿಶನ್ ಬ್ಯಾಟಿಂಗ್ ಆರಂಭಿಸಿದರು. ಈ ಆರಂಭಿಕ ಜೋಡಿ ಭಾರತಕ್ಕೆ ಉತ್ತಮ ಆರಂಭ ನೀಡಿ ಐದನೇ ಓವರ್‌ನಲ್ಲಿಯೇ 50 ರನ್‌ಗಳ ಗಡಿ ದಾಟಿಸಿದರು. ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಕಿಶನ್​ ಅವರ ಈ ಇನ್ನಿಂಗ್ಸ್​ನಲ್ಲಿ ಎರಡು ಬೌಂಡರಿ ಮತ್ತು ಏಳು ಸಿಕ್ಸರ್‌ಗಳು ಸೇರಿದ್ದವು.

ಅಭಿಷೇಕ್ ಶರ್ಮಾ ಕೂಡ 18 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 24 ರನ್ ಬಾರಿಸಿದರೆ, ತಿಲಕ್ ವರ್ಮಾ 19 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್ ನೆರವಿನಿಂದ 45 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್ ನೆರವಿನಿಂದ 30 ರನ್ ಗಳಿಸಿದರೆ ರಿಂಕು ಸಿಂಗ್ 16 ರನ್ ಬಾರಿಸಿದರು.

ಹಾರ್ದಿಕ್ ಪಾಂಡ್ಯ 10 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 30 ರನ್ ಬಾರಿಸಿದರೆ, ಅಕ್ಷರ್ ಪಟೇಲ್ 23 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ ಅಜೇಯ 35 ರನ್ ಸಿಡಿಸಿದರು. ದಕ್ಷಿಣ ಆಫ್ರಿಕಾ ಪರ ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಅನ್ರಿಚ್ ನೋಕಿಯಾ ಮತ್ತು ಕ್ವೆನಾ ಎಂಫಕಾ ತಲಾ ಒಂದು ವಿಕೆಟ್ ಪಡೆದರು.

Source link

Leave a Reply

Your email address will not be published. Required fields are marked *