ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ವೈಭವ್ ಮಾತ್ರವಲ್ಲದೆ, ಟೀಂ ಇಂಡಿಯಾದ ಅಗ್ರ ಕ್ರಮಾಂಕವೂ ಸಂಪೂರ್ಣವಾಗಿ ವಿಫಲವಾಯಿತು. ಜಾರ್ಜ್ ಮತ್ತು ವೈಭವ್ ನಂತರ, ವಿಕೆಟ್ ಕೀಪರ್ ಅಭಿಗ್ಯಾನ್ ಕುಂಡು ಮತ್ತು ವೇದಾಂತ್ ತ್ರಿವೇದಿ ಕೂಡ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿ ಪೆವಿಲಿಯನ್ ಸೇರಿಕೊಂಡರು.