2026 ರ ಟಿ20 ವಿಶ್ವಕಪ್ನ (T20 World Cup 2026) ಸೂಪರ್ 8 ಸುತ್ತಿಗೆ ಇಂದಿನಿಂದ ಚಾಲನೆ ದೊರೆತಿದೆ. ಸುತ್ತಿನ ಮೊದಲ ಪಂದ್ಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವೆ ಇಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಈ ಪಂದ್ಯ ಒಂದು ಎಸೆತವನ್ನು ಕಾಣದೆ ರದ್ದಾಗಿದೆ. ಇದೀಗ ಈ ಸುತ್ತಿನ ಎರಡನೇ ದಿನದ ಎರಡನೇ ಪಂದ್ಯ ಆತಿಥೇಯ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ನಡೆಯಲಿದೆ. ಫೆಬ್ರವರಿ 22 ರಂದು ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿವೆ.
ಅಜೇಯ ತಂಡಗಳ ನಡುವೆ ಪಂದ್ಯ
ಒಂದೆಡೆ ಗುಂಪು ಹಂತದಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಟೀಂ ಇಂಡಿಯಾ, ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದರೆ, ಇತ್ತ ದಕ್ಷಿಣ ಆಫ್ರಿಕಾ ಕೂಡ ಒಂದೇ ಒಂದು ಸೋಲನ್ನು ಕಂಡಿಲ್ಲ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಬಹುದಾಗಿದೆ. ಇದರ ಜೊತೆಗೆ ಕಳೆದ ಟಿ20 ವಿಶ್ವಕಪ್ ಫೈನಲ್ನಲ್ಲಿ ಇದೇ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಆಫ್ರಿಕಾವನ್ನು ಮಣಿಸಿದ್ದ ಭಾರತ ಚಾಂಪಿಯನ್ ಪಟ್ಟಕ್ಕೇರಿತ್ತು. ಹೀಗಾಗಿ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿಯಲ್ಲಿ ಆಫ್ರಿಕಾ ತಂಡವಿದ್ದರೆ, ಭಾರತ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಫೆಬ್ರವರಿ 22 ರಂದು ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೂಪರ್ 8 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೂಪರ್ 8 ಪಂದ್ಯವನ್ನು ನಾವು ಸ್ಟಾರ್ ಸ್ಪೋರ್ಟ್ಸ್ನ ವಿವಿದ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ನಲ್ಲೂ ಪಂದ್ಯವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಕುಲ್ದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಶ್ದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ.
ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್, ಜಾರ್ಜ್ ಲಿಂಡೆ, ಕಾರ್ಬಿನ್ ಬಾಷ್, ಕಗಿಸೊ ರಬಾಡ, ಜೇಸನ್ ಸ್ಮಿತ್, ಅನ್ರಿಚ್ ನೋಕಿಯಾ, ಲುಂಗಿ ಎನ್ಗಿಡಿ, ಮಾರ್ಕೊ ಯಾನ್ಸೆನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್ ಮತ್ತು ಕ್ವೆನಾ ಮಫಾಕ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 10:25 pm, Sat, 21 February 26