2026 ರ ಟಿ20 ವಿಶ್ವಕಪ್ನ (T20 World Cup 2026) ಗುಂಪು ಹಂತದ ಅಂತ್ಯದ ನಂತರ, ಸೂಪರ್ 8 ಸುತ್ತು ಆರಂಭವಾಗಿದೆ. ಸೂಪರ್ 8 ಸುತ್ತಿನಲ್ಲಿ ಆತಿಥೇಯ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (India vs South Africa) ವಿರುದ್ಧ ಆಡುತ್ತಿದೆ. ಈ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್ ಹಂತದಲ್ಲಿ ಆಡಿರುವ ಎಲ್ಲಾ ಪಂದ್ಯಗಳನ್ನು ಉಭಯ ತಂಡಗಳು ಗೆದ್ದುಕೊಂಡಿವೆ. ಆದ್ದರಿಂದ, ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಯಾರೇ ಸೋತರೂ ಅದು ಪಂದ್ಯಾವಳಿಯ ಮೊದಲ ಸೋಲಾಗಲಿದೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ
ಉಭಯ ತಂಡಗಳ ನಡುವಿನ ಈ ಕದನದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಆದ್ದರಿಂದ, ಟೀಂ ಇಂಡಿಯಾ ರನ್ಗಳನ್ನು ಬೆನ್ನಟ್ಟಿ ಗೆಲ್ಲಬೇಕಾಗುತ್ತದೆ. ಟಾಸ್ ಬಳಿಕ ಮಾತನಾಡಿದ ಐಡೆನ್ ಮಾರ್ಕ್ರಾಮ್ ತಂಡದ ಪ್ಲೇಯಿಂಗ್ 11 ನಲ್ಲಿ 4 ಬದಲಾವಣೆಗಳನ್ನು ಮಾಡಿರುವುದಾಗಿ ಘೋಷಿಸಿದರು.
ಅಕ್ಷರ್ ಪಟೇಲ್ ಔಟ್
ಇತ್ತ ಟಾಸ್ ಸೋತ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್, ‘ನಾವು ಕೂಡ ಮೊದಲು ಬ್ಯಾಟಿಂಗ್ ಮಾಡುವ ಬಗ್ಗೆ ಯೋಚಿಸುತ್ತಿದ್ದೆವು. ಆದರೆ ಟಾಸ್ ನಮ್ಮ ಪರವಾಗಿ ಹೋಗಲಿಲ್ಲ. ಕಳೆದ ಪಂದ್ಯವನ್ನು ಇಲ್ಲಿಯೇ ಆಡಿರುವುದರಿಂದ ಎರಡನೇ ಬಾರಿಗೆ ಬ್ಯಾಟಿಂಗ್ ಮಾಡುವಾಗ ಸಿಗುವ ಅನುಕೂಲಗಳನ್ನು ಉಪಯೋಗಿಸಿಕೊಳ್ಳುತ್ತೇವೆ ಎಂದರು. ಹಾಗೆಯೇ ಪ್ಲೇಯಿಂಗ್ 11 ಬಗ್ಗೆ ಮಾತನಾಡಿದ ಸೂರ್ಯ, ಅಕ್ಷರ್ ಪಟೇಲ್ ಇಲ್ಲದೆ ಆಡುತ್ತಿದ್ದೇವೆ. ಆದ್ದರಿಂದ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದರು.
ಮುಖಾಮುಖಿ ದಾಖಲೆ
ಟಿ20 ಕ್ರಿಕೆಟ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸ್ಪಷ್ಟ ಮುನ್ನಡೆ ಸಾಧಿಸಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಒಟ್ಟು 35 ಟಿ20 ಪಂದ್ಯಗಳು ನಡೆದಿವೆ. ಈ 35 ಪಂದ್ಯಗಳಲ್ಲಿ ಭಾರತ 21 ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 13 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ 1 ಪಂದ್ಯವ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.
IND vs SA T20 WC Live Score: ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ಉಭಯ ತಂಡಗಳು
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕಲ್ಟನ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಕಾಗಿಸೊ ರಬಾಡ, ಲುಂಗಿ ಎನ್ಗಿಡಿ.
ಭಾರತದ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 6:51 pm, Sun, 22 February 26