ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 15 ರಂದು ಆರಂಭವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ಆತಿಥೇಯ ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಇಬ್ಬರು ಅನುಭವಿ ಬ್ಯಾಟ್ಸ್ಮನ್ಗಳು ಗಾಯದಿಂದ ಬಳಲುತ್ತಿದ್ದು, ಇವರಿಬ್ಬರು ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ.