ಭಾರತ ಹಾಗೂ ಶ್ರೀಲಂಕಾ ನಡುವೆ ಗಾಲೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ತಮ್ಮ ಟೆಸ್ಟ್ ವೃತ್ತಿಜೀವನದ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ಸಾಯಿ ಸುದರ್ಶನ್ ಗಾಯದಿಂದ ಸರಣಿಯಿಂದ ಹೊರಗುಳಿದ ಕಾರಣ ಆಡುವ ಹನ್ನೊಂದರ ಬಳಗದಲ್ಲಿ ಆಡುವ ಅವಕಾಶ ಪಡೆದುಕೊಂಡಿರುವ ಪಡಿಕ್ಕಲ್ ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಯಶಸ್ವಿ ಜೈಸ್ವಾಲ್ ವಿಕೆಟ್ ಬಳಿಕ ಬ್ಯಾಟಿಂಗ್ಗೆ ಬಂದ ಪಡಿಕ್ಕಲ್ ಮೊದಲ ದಿನದಾಟದ ಎರಡನೇ ಸೆಷನ್ನಲ್ಲಿ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ಬಳಿಕವೂ ತಾಳ್ಮೆಯ ಆಟ ಮುಂದುವರೆಸಿದ ಪಡಿಕ್ಕಲ್ 134 ಎಸೆತಗಳಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಶತಕ ಪೂರೈಸಿದರು.