ಕೊಲಂಬೊದ ನಾನ್ಡಿಸ್ಕ್ರಿಪ್ಟ್ಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ XI ನಡುವಿನ 3 ದಿನಗಳ ಅಭ್ಯಾಸ ಪಂದ್ಯದ ಮೂರನೇ ದಿನದಂದು ಎರಡನೇ ಇನ್ನಿಂಗ್ಸ್ ಆರಂಭಿಸಿದ ಆತಿಥೇಯ ಶ್ರೀಲಂಕಾ ತಂಡ ಪೂರ್ಣ 45 ಓವರ್ ಬ್ಯಾಟಿಂಗ್ ಮಾಡಿ 200 ರನ್ ಕಲೆಹಾಕಿದೆ. ಮೊದಲ ಇನ್ನಿಂಗ್ಸ್ನಲ್ಲಿ 6 ರನ್ಗಳ ಮುನ್ನಡೆ ಪಡೆದುಕೊಂಡಿದ್ದ ಶ್ರೀಲಂಕಾ ಭಾರತದ ಗೆಲುವಿಗೆ 207 ರನ್ಗಳ ಗುರಿ ನೀಡಿದೆ. ಉಳಿದಿರುವ 45 ಓವರ್ಗಳಲ್ಲಿ ಭಾರತ ತಂಡ ಈ ಗುರಿಯನ್ನು ಬೆನ್ನಟ್ಟಬೇಕಿದೆ. ಇನ್ನು ಎರಡನೇ ಇನ್ನಿಂಗ್ಸ್ನಲ್ಲಿ ಶ್ರೀಲಂಕಾ ಪರ ಆರಂಭಿಕ ನಿಶಾನ್ ಮಧುಷ್ಕ ಅತ್ಯಧಿಕ 63 ರನ್ಗಳ ಇನ್ನಿಂಗ್ಸ್ ಆಡಿದರು. ಭಾರತದ ಪರ ಗುರ್ನೂರ್ ಬ್ರಾರ್ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು.