ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಶುಭ್ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರಿಂದ ಆರಂಭವಾಗಲಿದೆ. ಇದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 23 ರಿಂದ ಶುರುವಾಗಲಿದೆ. ಈ ಎರಡೂ ಪಂದ್ಯಗಳನ್ನು ಗೆದ್ದರೆ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ನಲ್ಲಿ ಮಹತ್ವದ ಮೈಲಿಗಲ್ಲು ದಾಟಲಿದೆ(PC-PTI).
ಟೀಂ ಇಂಡಿಯಾದ1932 ರಿಂದ ಟೆಸ್ಟ್ ಕ್ರಿಕೆಟ್ ಆಡುತ್ತಿದೆ. ಅಲ್ಲಿಂದ ಇಲ್ಲಿಯವರೆಗೆ ಟೀಂ ಇಂಡಿಯಾ 599 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ ಭಾರತ ತಂಡ 186 ಟೆಸ್ಟ್ ಪಂದ್ಯಗಳನ್ನು ಗೆದಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ತಂಡಗಳ ಪಟ್ಟಿಯಲ್ಲಿ ಪ್ರಸ್ತುತ ಐದನೇ ಸ್ಥಾನದಲ್ಲಿದೆ. ಇದೀಗ ಈ ಸರಣಿಯಲ್ಲಿ ಎರಡು ಪಂದ್ಯಗಳನ್ನು ಗೆದ್ದರೆ ಅದರ ಸ್ಥಾನ ಬದಲಾಗಲಿದೆ(PC-PTI).
ಆಗಸ್ಟ್ 15 ರಿಂದ ಪ್ರಾರಂಭವಾಗುವ ಎರಡು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ, ಶ್ರೀಲಂಕಾವನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದರೆ ತನ್ನ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 188 ಪಂದ್ಯಗಳನ್ನು ಗೆದ್ದ ಸಾಧನೆ ಮಾಡಲಿದೆ. ಈ ಮೂಲಕ ಟೀಂ ಇಂಡಿಯಾ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ತಂಡನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ಏರುತ್ತದೆ. ವೆಸ್ಟ್ ಇಂಡೀಸ್ ಇಲ್ಲಿಯವರೆಗೆ 187 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ(PC-PTI).
ಟೆಸ್ಟ್ ಕ್ರಿಕೆಟ್ನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಭಾರತಕ್ಕಿಂತ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ಸಾಧನೆ ಮಾಡಿವೆ. ಆಸ್ಟ್ರೇಲಿಯಾ 426 ಟೆಸ್ಟ್ ಪಂದ್ಯಗಳ ಗೆಲುವಿನೊಂದಿಗೆ ಅಗ್ರಸ್ಥಾನದಲ್ಲಿದೆ. 405 ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 191 ಪಂದ್ಯಗಳನ್ನು ಗೆದ್ದು ಮೂರನೇ ಸ್ಥಾನದಲ್ಲಿದೆ(PC-PTI).
ಈ ದಾಖಲೆಯ ಜೊತೆಗೆ ಭಾರತ ಟೆಸ್ಟ್ ಕ್ರಿಕೆಟ್ ದಾಖಲೆಯ ಪುಸ್ತಕಕ್ಕೆ ಮತ್ತೊಂದು ದಾಖಲೆಯೂ ಸೇರಿಕೊಳ್ಳಲಿದೆ. ಅದೆನೆಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ಇದುವರೆಗೆ 599 ಪಂದ್ಯಗಳನ್ನು ಆಡಿದ್ದು, ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಭಾರತಕ್ಕೆ 600ನೇ ಟೆಸ್ಟ್ ಪಂದ್ಯವಾಗಲಿದೆ. ಈ ಮೂಲಕ ಭಾರತ 600 ಟೆಸ್ಟ್ ಪಂದ್ಯಗಳನ್ನು ಆಡಿದ ವಿಶ್ವದಾದ್ಯಂತ ಆಯ್ದ ತಂಡಗಳ ಗುಂಪಿಗೆ ಸೇರಲಿದೆ(PC-PTI).
