ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇನ್ನೇರಡು ದಿನಗಳಲ್ಲಿ ಆರಂಭವಾಗಿದೆ. ಈಗಾಗಲೇ ನಡೆದ ಅಭ್ಯಾಸ ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿದೆ. ಇದೀಗ ಸರಣಿಯ ಮೊದಲ ಪಂದ್ಯವನ್ನು ಗೆದ್ದು, ಸರಣಿಯಲ್ಲಿ ಮುನ್ನಡೆ ಪಡೆದುಕೊಳ್ಳಲು ಪ್ರಯತ್ನಿಸಲಿದೆ. ಆದಾಗ್ಯೂ ಟೀಂ ಇಂಡಿಯಾಕ್ಕೆ ಗಾಯಾಳುಗಳ ಸಮಸ್ಯೆ ಕಾಡುತ್ತಿರುವುದು ನಾಯಕ ಶುಭ್ಮನ್ ಗಿಲ್ಗೆ ಕೊಂಚ ತಲೆನೋವುಂಟು ಮಾಡಿದೆ. ಆದಾಗ್ಯೂ ಪ್ರಸ್ತುತ ತಂಡದಲ್ಲಿರುವ ಆಟಗಾರರು ಲಂಕಾ ತಂಡವನ್ನು ಸಮರ್ಥವಾಗಿ ಎದುರಿಸುವ ವಿಶ್ವಾಸವಿದೆ. ಆದರೆ ಅದಕ್ಕೂ ಮೊದಲು ಸರಣಿಯ ಮೊದಲ ಟೆಸ್ಟ್ ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಲಿದೆ. ಅಲ್ಲದೆ, ನೀವು ಈ ಪಂದ್ಯವನ್ನು ಟಿವಿ ಮತ್ತು ಮೊಬೈಲ್‌ನಲ್ಲಿ ಹೇಗೆ ವೀಕ್ಷಿಸಬಹುದು? ಎಂಬುದರ ಪೂರ್ಣ ವಿವರನ್ನು ನಾವು ನಿಮಗೆ ನೀಡಲಿದ್ದೇವೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರ ಶನಿವಾರ ಆರಂಭವಾಗಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವು ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಬೆಳಿಗ್ಗೆ 9:30 ಕ್ಕೆ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ನೋಡಬಹುದು?
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ನೀವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಮೊಬೈಲ್‌ನಲ್ಲಿ ನೋಡುವುದು ಹೇಗೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ನೀವು ಸೋನಿ ಲಿವ್ ಅಪ್ಲಿಕೇಶನ್ ಬಳಸಿ ನಿಮ್ಮ ಮೊಬೈಲ್‌ನಲ್ಲಿ ವೀಕ್ಷಿಸಬಹುದು.
IND vs SL: ಟೆಸ್ಟ್ ಕ್ರಿಕೆಟ್ನಲ್ಲಿ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ಟೀಂ ಇಂಡಿಯಾ
ಉಭಯ ತಂಡಗಳು
ಟೆಸ್ಟ್ ಸರಣಿಗೆ ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ ಪಡಿಕ್ಕಲ್, ಸರನ್ಶ್ ಜೈನ್, ಔಕಿಬ್ ನಬಿ, ಸರ್ಫರಾಜ್ ಖಾನ್.
ಗಾಲೆ ಟೆಸ್ಟ್ ಪಂದ್ಯಕ್ಕೆ ತಂಡ: ಧನಂಜಯ ಡಿ ಸಿಲ್ವ(ನಾಯಕ), ಲಹಿರು ಉದಾನ, ನಿಶಾನ್ ಮದುಷ್ಕ, ಕಮಿಂದು ಮೆಂಡಿಸ್, ದಿನೇಶ್ ಚಾಂಡಿಮಲ್, ಪಸಿಂದು ಸೂರಿಯಬಂಡಾರ, ಸೋನಾಲ್ ದಿನುಶಾ, ನಿರೋಶನ್ ಡಿಕ್ವೆಲ್ಲಾ, ರಮೇಶ್ ಮೆಂಡಿಸ್, ಪ್ರಭಾತ್ ಜಯಸೂರ್ಯ, ಕೇಶರ ನುವಂತ, ಮಿಲನ್ ರತ್ನಾಯಕೆ, ಅಸಿತ ಫೆರ್ನಾಂಡೋ, ಲಹಿರು ಕುಮಾರ, ವಿಶ್ವ ಫೆರ್ನಾಂಡೋ, ದಿಲ್ಶನ್ ಮಧುಶಂಕ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 9:05 pm, Thu, 13 August 26
