ಗಾಲೆಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್ ಕೂಡ ಮುಗಿಸಿದೆ. 4ನೇ ದಿನದಾಟದಂದು ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಕೇವಲ 2 ಸೆಷನ್ಗಳನ್ನು ಆಡಲಷ್ಟೇ ಶಕ್ತವಾಯಿತು. 4ನೇ ದಿನದಾಟದ ಎರಡನೇ ಸೆಷನ್ ಮುಗಿಯುವುದಕ್ಕೂ ಮುನ್ನವೇ ಟೀಂ ಇಂಡಿಯಾ ತನ್ನೇಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 193 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದರೊಂದಿಗೆ ಆತಿಥೇಯ ಶ್ರೀಲಂಕಾ ತಂಡಕ್ಕೆ 372 ರನ್ಗಳ ಕಠಿಣ ಗುರಿ ನೀಡಿದೆ. ಎರಡನೇ ಇನ್ನಿಂಗ್ಸ್ನಲ್ಲಿ ರಿಷಭ್ ಪಂತ್ 66 ರನ್, ದೇವದತ್ ಪಡಿಕ್ಕಲ್ 44 ರನ್ ಮತ್ತು ಕೆಎಲ್ ರಾಹುಲ್ 35 ರನ್ ಬಾರಿಸಿದ್ದನ್ನು ಬಿಟ್ಟರೆ ಉಳಿದವರಿಗೆ ಒಂದಂಕಿ ಮೊತ್ತವನ್ನು ದಾಟಲು ಸಾಧ್ಯವಾಗಲಿಲ್ಲ.
