IND vs SL: 284 ರನ್​ಗಳಿಗೆ ಶ್ರೀಲಂಕಾ ಆಲೌಟ್; ಭಾರತಕ್ಕೆ 178 ರನ್ ಮುನ್ನಡೆ

ಗಾಲೆಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ತಮ್ಮ ತಮ್ಮ ಮೊದಲ ಇನ್ನಿಂಗ್ಸ್ ಆಡಿ ಮುಗಿಸಿವೆ. ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 462 ರನ್ ಕಲೆಹಾಕಿದರೆ, ಆತಿಥೇಯ ಶ್ರೀಲಂಕಾ 284 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 178 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಶ್ರೀಲಂಕಾ ಪರ ಯುವ ಬ್ಯಾಟರ್ ಸೋನಾಲ್ ದಿನುಷಾ ಚೊಚ್ಚಲ ಟೆಸ್ಟ್ ಶತಕ ಬಾರಿಸಿದರೆ, ನಿರೋಷನ್ ಡಿಕ್ವೆಲ್ಲಾ 80 ರನ್​ಗಳ ಇನ್ನಿಂಗ್ಸ್ ಆಡಿದರು. ಇವರಿಬ್ಬರ ಆಟದಿಂದ ಶ್ರೀಲಂಕಾ ತಂಡ ಫಾಲೋ ಆನ್​ನಿಂದ ಪಾರಾಯಿತು. ಇತ್ತ ಟೀಂ ಇಂಡಿಯಾ ಪರ ಮಾನವ್ ಸುತಾರ್ 4 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ 3 ವಿಕೆಟ್ ಪಡೆದರು. ಉಳಿದಂತೆ ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಕುಲ್ದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.

Source link

Leave a Reply

Your email address will not be published. Required fields are marked *