IND vs WI: ಭಾರತ- ವಿಂಡೀಸ್ ಮಾಡು ಇಲ್ಲವೇ ಮಡಿ ಪಂದ್ಯ ಯಾವಾಗ ಎಲ್ಲಿ ನಡೆಯಲಿದೆ? – Kannada News | Ind vs WI Live Streaming When and Where to Watch India vs West Indies T20 World Cup Today Cricket Match Score in Kannada

2026 ರ ಟಿ20 ವಿಶ್ವಕಪ್ (T20 World Cup 2026) ಗೆಲ್ಲಲು ಟೀಮ ಇಂಡಿಯಾ ಮೂರು ಹೆಜ್ಜೆ ದೂರದಲ್ಲಿದೆ. ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಬೇಕೆಂದರೆ ಮುಂಬರುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಅದರಲ್ಲಿ ಒಂದು ಪಂದ್ಯವನ್ನು ಸೂಪರ್ 8 ಸುತ್ತಿನಲ್ಲಿ ಆಡಿರುವ ಭಾರತ ತಂಡ, ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ (India vs West Indies) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಏಕೆಂದರೆ ಈ ಪಂದ್ಯದ ವಿಜೇತರು ಸೆಮಿಫೈನಲ್‌ಗೆ ಟಿಕೆಟ್ ಪಡೆಯುತ್ತಾರೆ. ಆದ್ದರಿಂದ, ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲುವುದು ಅವಶ್ಯಕವಾಗಿದೆ.

ಸೂಪರ್ 8 ಸುತ್ತಿನಲ್ಲಿ ವೆಸ್ಟ್ ಇಂಡೀಸ್ ತಂಡ ಒಂದು ಪಂದ್ಯವನ್ನು ಗೆದ್ದು ಪಂದ್ಯವನ್ನು ಸೋತಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇತ್ತ ಟೀಂ ಇಂಡಿಯಾ ಕೂಡ ಒಂದು ಪಂದ್ಯದಲ್ಲಿ ಸೋತು, ಒಂದು ಪಂದ್ಯವನ್ನು ಗೆದ್ದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಭಾರತದ ನೆಟ್ ರನ್​ರೇಟ್​ಗಿಂತ ವೆಸ್ಟ್ ಇಂಡೀಸ್ ತಂಡದ ನೆಟ್ ರನ್​ರೇಟ್​ ಉತ್ತಮವಾಗಿರುವುದರಿಂದ ವಿಂಡೀಸ್ ಪಡೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಉಭಯ ತಂಡಗಳ ಮುಖಾಮುಖಿಯಲ್ಲಿ ಗೆಲ್ಲುವ ತಂಡಕ್ಕೆ ಸೆಮಿಫೈನಲ್‌ ಟಿಕೆಟ್ ದೊರೆಯಲಿದೆ. ಉಳಿದಂತೆ ಈ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ ತಂಡ ಈಗಾಗಲೇ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಮಾರ್ಚ್​ 1 ರಂದು ನಡೆಯಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯವನ್ನು ನಾವು ಸ್ಟಾರ್ ಸ್ಪೋರ್ಟ್ಸ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್​ನಲ್ಲೂ ಪಂದ್ಯವನ್ನು ವೀಕ್ಷಿಸಬಹುದು.

IND vs WI: ಭಾರತ- ವಿಂಡೀಸ್ ಪಂದ್ಯ ರದ್ದಾದರೆ ಯಾರಿಗೆ ಸೆಮಿಫೈನಲ್ ಟಿಕೆಟ್?

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಕುಲ್ದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಶ್ದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ.

ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕಿ), ಶಿಮ್ರಾನ್ ಹೆಟ್ಮೆಯರ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋತಿ, ರೋವ್‌ಮನ್ ಪೊವೆಲ್, ಶೆರ್ಫೇನ್ ರುದರ್‌ಫೋರ್ಡ್, ಕ್ವೆಂಟಿನ್ ಸ್ಯಾಂಪ್ಸನ್, ಜೇಡನ್ ಸೀಲ್ಸ್, ರೊಮಾರಿಯೋ ಶೆಫರ್ಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *