IND vs ZIM: ಕೊನೆಯ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs Zimbabwe 3rd T20: Shreyas Iyer’s Team Aims for Clean Sweep; Playing XI, Toss and Live Updates

ಮೂರು ಪಂದ್ಯಗಳ ಟಿ20 ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಮೊದಲ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಈಗ, ಭಾರತ ತಂಡವು ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಆತಿಥೇಯರನ್ನು ಕ್ಲೀನ್ ಸ್ವೀಪ್ ಮಾಡುವತ್ತ ಗಮನ ಹರಿಸಿದೆ. ಈ ಪಂದ್ಯವು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿದೆ. ಮೊದಲ ಟಿ20 ಪಂದ್ಯದಲ್ಲಿ ಜಿಂಬಾಬ್ವೆಯನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ಸರಣಿಯನ್ನು ಅಬ್ಬರದಿಂದ ಆರಂಭಿಸಿತು. ಎರಡನೇ ಪಂದ್ಯದಲ್ಲಿಯೂ ತನ್ನ ಅಬ್ಬರ ಮುಂದುವರೆಸಿದ ಟೀಂ ಇಂಡಿಯಾ ಆತಿಥೇಯರನ್ನು 90 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತು. ಇದೀಗ ಮೂರನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಆಲ್‌ರೌಂಡರ್ ಶಿವಂ ದುಬೆ ಮತ್ತು ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದ ಪ್ರಿನ್ಸ್ ಯಾದವ್ ಅವರನ್ನು ಈ ಪಂದ್ಯದಿಂದ ಕೈಬಿಟ್ಟು, ಅಶೋಕ್ ಶರ್ಮಾ ಮತ್ತು ಸೂರ್ಯಾಂಶ್ ಶೆಡ್ಗೆ ಅವರನ್ನು ತಂಡದಲ್ಲಿ ಆಡಿಸಲಾಗುತ್ತಿದೆ.

ಉಭಯ ತಂಡಗಳು

ಜಿಂಬಾಬ್ವೆಯ ಆಡುವ 11: ಬ್ರಿಯಾನ್ ಬೆನೆಟ್, ಬೆನ್ ಕರನ್, ಡಿಯೋನ್ ಮೈಯರ್ಸ್, ಸಿಕಂದರ್ ರಜಾ (ನಾಯಕ), ರಯಾನ್ ಬರ್ಲ್, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಾನಿ (ವಿಕೆಟ್ ಕೀಪರ್), ಬ್ರಾಡ್ ಇವಾನ್ಸ್, ನ್ಯೂಮನ್ ನ್ಯಾಮುರಿ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಜರಬಾನಿ.

ಭಾರತದ ಪ್ಲೇಯಿಂಗ್ 11: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ರವಿ ಬಿಷ್ಣೋಯ್, ಅಶೋಕ್ ಶರ್ಮಾ, ಯಶ್ ಠಾಕೂರ್, ಮಯಾಂಕ್ ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:21 pm, Sun, 26 July 26

Source link

Leave a Reply

Your email address will not be published. Required fields are marked *