ಭಾರತ ಮತ್ತು ಜಿಂಬಾಬ್ವೆ (India vs Zimbabwe) ನಡುವೆ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 90 ರನ್ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ, ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಹೀಗಾಗಿ ಉಭಯ ತಂಡಗಳ ನಡುವೆ ನಡೆಯಲಿರುವ ಮೂರನೇ ಟಿ20 ಪಂದ್ಯವು ಟೀಂ ಇಂಡಿಯಾಕ್ಕೆ ಔಪಚಾರಿಕವಾಗಿರಲಿದೆ. ಆದಾಗ್ಯೂ ಕಳೆದೆರಡು ಸರಣಿಗಳಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದ ಟೀಂ ಇಂಡಿಯಾ, ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಆತಿಥೇಯರನ್ನು ಕ್ಲೀನ್ಸ್ವೀಪ್ ಮಾಡುವ ಗುರಿ ಹೊಂದಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ 3ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ 3ನೇ ಟಿ20 ಪಂದ್ಯ ಜುಲೈ 26 ರ ಭಾನುವಾರದಂದು ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ 3ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ 3ನೇ ಟಿ20 ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ 3ನೇ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ಭಾರತ ಮತ್ತು ಜಿಂಬಾಬ್ವೆ ನಡುವಿನ 3ನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 4:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 4 ಗಂಟೆಗೆ ನಡೆಯಲಿದೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ 3ನೇ ಟಿ20 ಪಂದ್ಯವನ್ನು ನಾನು ಟಿವಿಯಲ್ಲಿ ಹೇಗೆ ನೋಡಬಹುದು?
ಭಾರತ ಮತ್ತು ಜಿಂಬಾಬ್ವೆ ನಡುವಿನ 3ನೇ ಟಿ20 ಪಂದ್ಯವನ್ನು ನೀವು Unite8 ಸ್ಪೋರ್ಟ್ಸ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು. ಹಾಗೆಯೇ ಮೊಬೈಲ್ನಲ್ಲಿ FanCode ಅಪ್ಲಿಕೇಶನ್ ಬಳಸಿ ವೀಕ್ಷಿಸಬಹುದು.
IND vs ZIM: ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ
ಉಭಯ ತಂಡಗಳು
ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಪ್ರಭ್ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ, ಮಾಯಾಂಕ್ ಯಾದವ್.
ಜಿಂಬಾಬ್ವೆ ತಂಡ: ಸಿಕಂದರ್ ರಝಾ (ನಾಯಕ), ಬ್ರಿಯಾನ್ ಬೆನೆಟ್, ರಿಯಾನ್ ಬರ್ಲ್, ತನಕಾ ಚಿವಂಗಾ, ಬೆನ್ ಕರನ್, ಬ್ರಾಡ್ ಇವಾನ್ಸ್, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮನಿ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಜರಾಬಾನಿ, ಡಿಯೋನ್ ಮೈಯರ್ಸ್, ರಿಚರ್ಡ್ ನ್ಗರ್ವಾ, ನ್ಯೂಮನ್ ನ್ಯಾಮುರಿ, ಮಿಲ್ಟನ್ ಶುಂಬಾ, ಮಿಲ್ಟನ್ ಶುಂಬಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ