IND vs ZIM: ಭಾರತ- ಜಿಂಬಾಬ್ವೆ ನಡುವಿನ ನಿರ್ಣಾಯಕ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? – Kannada News | T20 World Cup Super 8: India vs Zimbabwe Match Date, Time and Live Streaming

2026 ರ ಟಿ20 ವಿಶ್ವಕಪ್‌ನ (T20 World Cup) ಮೊದಲ ಸೂಪರ್-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿತು. ಈ ಸೋಲಿನಿಂದ ಟೀಂ ಇಂಡಿಯಾ ಸೆಮಿಫೈನಲ್ ತಲುಪುವುದು ಕಷ್ಟಕರವಾಗಿದೆ. ಹೀಗಾಗಿ ಟೀಂ ಇಂಡಿಯಾ ಸೆಮಿಫೈನಲ್‌ಗೇರಬೇಕೆಂದರೆ ಉಳಿದಿರುವ ಎರಡೂ ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆಲ್ಲಬೇಕಿದೆ. ಟೀಂ ಇಂಡಿಯಾ ತನ್ನ ಎರಡನೇ ಸೂಪರ್ 8 ಪಂದ್ಯವನ್ನು ಜಿಂಬಾಬ್ವೆ (India vs Zimbabwe) ವಿರುದ್ಧ ಆಡುತ್ತಿದೆ. ಲೀಗ್ ಹಂತದಲ್ಲಿ ಅಮೋಘ ಪ್ರದರ್ಶನ ನೀಡಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿರುವ ಜಿಂಬಾಬ್ವೆ ತಂಡವನ್ನು ಟೀಂ ಇಂಡಿಯಾ ಕಡಿಮೆ ಅಂದಾಜು ಮಾಡುವಂತಿಲ್ಲ. ಟೀಂ ಇಂಡಿಯಾ ಸಾಂಘಿಕ ಪ್ರದರ್ಶನ ನೀಡಿದರೆ ಮಾತ್ರ ಮುಂದಿನ ಸುತ್ತಿಗೆ ತನ್ನ ಕನಸನ್ನು ಜೀವಂತವಾಗಿರಿಸಿಕೊಳ್ಳಬಹುದು. ಇಲ್ಲದಿದ್ದರೆ, ತಂಡದ ಪಯಣ ಸೂಪರ್ 8 ಸುತ್ತಿನಲ್ಲೇ ಕೊನೆಗೊಳ್ಳಬಹುದು.

ಭಾರತ ಮತ್ತು ಜಿಂಬಾಬ್ವೆ ನಡುವಿನ ಸೂಪರ್ 8 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಜಿಂಬಾಬ್ವೆ ನಡುವಿನ ಸೂಪರ್ 8 ಪಂದ್ಯ ಫೆಬ್ರವರಿ 26 ರಂದು ನಡೆಯಲಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಸೂಪರ್ 8 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಜಿಂಬಾಬ್ವೆ ನಡುವಿನ ಸೂಪರ್ 8 ಪಂದ್ಯ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಸೂಪರ್ 8 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಜಿಂಬಾಬ್ವೆ ನಡುವಿನ ಸೂಪರ್ 8 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಸೂಪರ್ 8 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಜಿಂಬಾಬ್ವೆ ನಡುವಿನ ಸೂಪರ್ 8 ಪಂದ್ಯವನ್ನು ನಾವು ಸ್ಟಾರ್ ಸ್ಪೋರ್ಟ್ಸ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್​ನಲ್ಲೂ ಪಂದ್ಯವನ್ನು ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಕುಲ್ದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಅರ್ಶ್ದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ.

ಜಿಂಬಾಬ್ವೆ: ಸಿಕಂದರ್ ರಝಾ (ನಾಯಕ), ಬ್ರಿಯಾನ್ ಬೆನೆಟ್, ರಿಯಾನ್ ಬರ್ಲ್, ಗ್ರೇಮ್ ಕ್ರೀಮರ್, ಬ್ರಾಡ್ಲಿ ಇವಾನ್ಸ್, ಕ್ಲೈವ್ ಮದಂಡೆ, ಟಿನೊಟೆಂಡಾ ಮಪೋಸಾ, ತಡಿವಾನಾಶೆ ಮರುಮಾನಿ, ವೆಲ್ಲಿಂಗ್ಟನ್ ಮಸಕಡ್ಜಾ, ಟೋನಿ ಮುನ್ಯೊಂಗಾ, ತಶಿಂಗಾ ಮುಸೆಕಿವಾ, ಬ್ಲೆಸ್ಸಿಂಗ್ ಮುಜರಾಬಾನಿ, ಡಿಯೋನ್ ಮೈಯರ್ಸ್, ರಿಚರ್ಡ್ ನ್ಗರಾವ, ಬ್ರೆಂಡನ್ ಟೇಲರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *