ಹರಾರೆಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆತಿಥೇಯ ಜಿಂಬಾಬ್ವೆ ತಂಡವನ್ನು 7 ವಿಕೆಟ್ಗಳಿಂದ ಮಣಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 125 ರನ್ ಗಳಿಸಿತು. ತಂಡದ ಪರ ವೆಸ್ಲಿ ಮಾಧೇವೆರೆ 39 ಮತ್ತು ಮರುಮಾನಿ 27 ರನ್ಗಳ ಇನ್ನಿಂಗ್ಸ್ ಆಡಿದರು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 3 ವಿಕೆಟ್‌ಗಳನ್ನು ಕಳೆದುಕೊಂಡು 14ನೇ ಓವರ್ನಲ್ಲಿ ಗೆಲುವಿನ ದಡ ಮುಟ್ಟಿತು. ತಂಡದ ಪರ ವೈಭವ್ ಸೂರ್ಯವಂಶಿ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದರು. ಈ ಗೆಲುವಿನೊಂದಿಗೆ ಶ್ರೇಯಸ್ ಅಯ್ಯರ್ ನಾಯಕನಾಗಿ ತಮ್ಮ ಗೆಲುವಿನ ಖಾತೆಯನ್ನು ತೆರೆದರು.
