ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ 81 ರನ್ಗಳ ಇನ್ನಿಂಗ್ಸ್ ಆಡಿದರು. ಕೇವಲ 44 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಈ ಅರ್ಧಶತಕದ ಇನ್ನಿಂಗ್ಸ್ ಆಡಿದ ಕಿಶನ್ ಕೇವಲ 19 ರನ್ಗಳ ಅಂತರದಿಂದ ಶತಕ ವಂಚಿತರಾದರು. ಆದಾಗ್ಯೂ ಕಿಶನ್ ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಕಿಂಗ್ ಕೊಹ್ಲಿಯ ದಾಖಲೆಯನ್ನು ಮುರಿದರು(PC-PTI).
ಈ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡ ಕೇವಲ 29 ರನ್ಗಳಿಗೆ ಆರಂಭಿಕರಿಬ್ಬರನ್ನು ಕಳೆದುಕೊಂಡಿತು. ಈ ಹಂತದಲ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದ ಕಿಶನ್ ಅದ್ಭುತ ಇನ್ನಿಂಗ್ಸ್ ಆಡಿದರು. 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಕಿಶನ್ 44 ಎಸೆತಗಳಲ್ಲಿ 81 ರನ್ ಬಾರಿಸಿ ಔಟಾದರು(PC-PTI).
ಈ 81 ರನ್ಗಳ ಇನ್ನಿಂಗ್ಸ್ ಮೂಲಕ ಕಿಶನ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಒಂದೇ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಪಾಕಿಸ್ತಾನದ ಬ್ಯಾಟ್ಸ್ಮನ್ ಮೊಹಮ್ಮದ್ ರಿಜ್ವಾನ್ ಒಂದೇ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ -10 ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ(PC-PTI).
ಇಶಾನ್ ಕಿಶನ್ 2026 ರಲ್ಲಿ ಇದುವರೆಗೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಒಟ್ಟು 783 ರನ್ ಗಳಿಸಿದ್ದಾರೆ. ಈ ಮೂಲಕ ಈ ಸ್ವರೂಪದಲ್ಲಿ ಒಂದೇ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಎಂಟನೇ ಸ್ಥಾನಕ್ಕೇರಿದ್ದಾರೆ. ಕೊಹ್ಲಿ 2022 ರಲ್ಲಿ ಒಟ್ಟು 781 ರನ್ ಗಳಿಸಿದ್ದರು. ಪಾಕಿಸ್ತಾನದ ಬ್ಯಾಟ್ಸ್ಮನ್ ಮೊಹಮ್ಮದ್ ರಿಜ್ವಾನ್ 2021 ರಲ್ಲಿ 1,326 ರನ್ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ(PC-PTI).
ಹಾಗೆಯೇ ಭಾರತದ ಮಾಜಿ ಟಿ20 ನಾಯಕ ಸೂರ್ಯಕುಮಾರ್ ಯಾದವ್ 2022 ರಲ್ಲಿ 1,164 ರನ್ ಗಳಿಸುವ ಮೂಲಕ ಒಂದೇ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರಿಜ್ವಾನ್ 2022 ರಲ್ಲಿ 996 ರನ್ ಗಳಿಸುವ ಮೂಲಕ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ, 2021 ರಲ್ಲಿ 939 ರನ್ಗಳೊಂದಿಗೆ ಬಾಬರ್ ಆಝಂ ನಾಲ್ಕನೇ ಸ್ಥಾನದಲ್ಲಿದ್ದಾರೆ(PC-PTI).
ಉಳಿದಂತೆ ಅಭಿಷೇಕ್ ಶರ್ಮಾ 2025 ರಲ್ಲಿ 859 ರನ್ ಗಳಿಸುವ ಮೂಲಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದರೆ, 2025 ರಲ್ಲಿ 771 ರನ್ ಬಾರಿಸಿದ್ದ ಪಾಕಿಸ್ತಾನದ ಬ್ಯಾಟ್ಸ್ಮನ್ ಸಾಹಿಬ್ಜಾದಾ ಫರ್ಹಾನ್ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ. ಆದಾಗ್ಯೂ, ಇಶಾನ್ಗೆ ಅನೇಕ ಆಟಗಾರರನ್ನು ಮೀರಿಸಲು ಉತ್ತಮ ಅವಕಾಶವಿದೆ(PC-PTI).
