ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ, ಜಿಂಬಾಬ್ವೆಯನ್ನು (India vs Zimbabwe) 7 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ಶ್ರೇಯಸ್ ಅಯ್ಯರ್ (Shreyas Iyer) ಪಡೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಳ್ಳುವ ಅವಕಾಶವನ್ನು ಹೊಂದಿದೆ. ಮೊದಲ ಪಂದ್ಯದಲ್ಲಿ, ಶ್ರೇಯಸ್ ಅಯ್ಯರ್ ಯುವ ಆಟಗಾರರಿಗೆ ಪ್ಲೇಯಿಂಗ್ 11 ರಲ್ಲಿ ಅವಕಾಶ ನೀಡಿದ್ದರು. ಅಶೋಕ್ ಶರ್ಮಾ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರೆ, ಮಯಾಂಕ್ ಯಾದವ್ ಎರಡು ವರ್ಷಗಳ ನಂತರ ತಂಡಕ್ಕೆ ಮರಳಿದ್ದರು. ಮಯಾಂಕ್ ಸಿಕ್ಕ ಅವಕಾಶದಲ್ಲಿ ಮಿಂಚಿದರೆ, ಅಶೋಕ್ ಶರ್ಮಾಗೆ ಉತ್ತಮ ಆರಂಭ ಸಿಗಲಿಲ್ಲ. ಇತ್ತ ಅಭಿಷೇಕ್ ಶರ್ಮಾ ಕೂಡ ಮೊದಲ ಪಂದ್ಯದಲ್ಲಿ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಎರಡನೇ ಪಂದ್ಯದಿಂದ ಇವರಿಬ್ಬರನ್ನು ಹೊರಗಿಡಲಾಗುತ್ತಾ ಅಥವಾ ಅದೇ ತಂಡವನ್ನು ಕಣಕ್ಕಿಳಿಸಲಾಗುತ್ತಾ ಎಂಬುದು ಪ್ರಶ್ನೆ.
ಅಶೋಕ್ ಶರ್ಮಾಗೆ ಮತ್ತೊಂದು ಅವಕಾಶ
ಎರಡನೇ ಪಂದ್ಯಕ್ಕೆ ಭಾರತ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳು ತೀರ ಕಡಿಮೆ. ಏಕೆಂದರೆ ಗೆಲುವಿನ ಸಂಯೋಜನೆಯನ್ನು ಯಾರೂ ಕೂಡ ಬದಲಿಸಲು ಹೋಗುವುದಿಲ್ಲ. ಆದಾಗ್ಯೂ ತಂಡದಲ್ಲಿ ಒಂದೇ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ. ಅಶೋಕ್ ಶರ್ಮಾ ಚೊಚ್ಚಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ನಾಲ್ಕು ಓವರ್‌ಗಳಲ್ಲಿ 29 ರನ್‌ಗಳನ್ನು ಬಿಟ್ಟುಕೊಟ್ಟರಾದರೂ ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಆದಾಗ್ಯೂ ಅವರಿಗೆ ಎರಡನೇ ಪಂದ್ಯದಲ್ಲಿ ಅವರಿಗೆ ಮತ್ತೊಂದು ಅವಕಾಶ ಸಿಗಬಹುದು.
ಅಭಿಷೇಕ್ ಬದಲಿಗೆ ಪ್ರಭ್‌ಸಿಮ್ರಾನ್?
ಆದರೆ ಬ್ಯಾಟಿಂಗ್ ವಿಭಾಗದಲ್ಲಿ 1 ಬದಲಾವಣೆಯಾಗಬಹುದು. ಅಭಿಷೇಕ್ ಶರ್ಮಾ ಇತ್ತೀಚೆಗೆ ಸ್ಥಿರ ಪ್ರದರ್ಶನ ನೀಡುತ್ತಿಲ್ಲ. ವಿಶ್ವಕಪ್‌ನಲ್ಲಿ ಅವರ ಪ್ರದರ್ಶನವೂ ಕಳಪೆಯಾಗಿತ್ತು. ಅವರು ತಮ್ಮ ಕೊನೆಯ ಐದು ಇನ್ನಿಂಗ್ಸ್‌ಗಳಲ್ಲಿ ಕೇವಲ 73 ರನ್‌ಗಳನ್ನು ಮಾತ್ರ ಗಳಿಸಿದ್ದಾರೆ. ಮೊದಲ ಟಿ20ಯಲ್ಲಿ 8 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ಔಟಾಗಿದ್ದರು. ಹೀಗಾಗಿ ಅಭಿಷೇಕ್ ಬದಲಿಗೆ ಪ್ರಭ್‌ಸಿಮ್ರಾನ್‌ಗೆ ಅವಕಾಶ ನೀಡಬಹುದು. ಇದು ಸಾಧ್ಯವಾದರೆ ವೈಭವ್ ಮತ್ತು ಪ್ರಭ್‌ಸಿಮ್ರಾನ್ ಆರಂಭಿಕರಾಗಿ ಕಣಕ್ಕಿಳಿಯಬಹುದು. ಉಳಿದಂತೆ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ.
ಪಿಚ್ ವರದಿ
ಹರಾರೆಯಲ್ಲಿರುವ ಪಿಚ್ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳಿಗೆ ಇಬ್ಬರಿಗೂ ಅನುಕೂಲಕರವಾಗಿದೆ. ಮೊದಲ ಪಂದ್ಯದಲ್ಲಿ ಬೌಲರ್‌ಗಳು ಉತ್ತಮ ಬೌನ್ಸ್ ಪಡೆದರು. ಮಾಯಾಂಕ್ ಯಾದವ್ ಅವರ ಬೌಲಿಂಗ್‌ನಿಂದ ವಿಕೆಟ್ ಕೀಪಿಂಗ್ ಮಾಡುವಾಗ ಇಶಾನ್ ಕಿಶನ್ ಕಷ್ಟಪಟ್ಟು ಕೆಲಸ ಮಾಡಬೇಕಾಯಿತು. ಆದ್ದರಿಂದ, ಈ ಪಿಚ್ ಸ್ಪಿನ್ನರ್‌ಗಳಿಗಿಂತ ವೇಗದ ಬೌಲರ್‌ಗಳಿಗೆ ಅನುಕೂಲಕರವಾಗಿದೆ. ಈ ಪಿಚ್‌ನಲ್ಲಿ 170 ಕ್ಕಿಂತ ಹೆಚ್ಚಿನ ಸ್ಕೋರ್ ಗುರಿ ಕಲೆಹಾಕುವುದು ಕಷ್ಟ.
IND vs ZIM: ಭಾರತ- ಜಿಂಬಾಬ್ವೆ ನಡುವೆ 2ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?
ಹರಾರೆಯಲ್ಲಿ ಎರಡೂ ತಂಡಗಳ ದಾಖಲೆ
ಇಲ್ಲಿಯವರೆಗೆ, ಭಾರತ ಮತ್ತು ಜಿಂಬಾಬ್ವೆ ನಡುವೆ ಹರಾರೆ ಮೈದಾನದಲ್ಲಿ 13 ಪಂದ್ಯಗಳು ನಡೆದಿವೆ. ಭಾರತ ಈ ಪಂದ್ಯಗಳಲ್ಲಿ 10 ಪಂದ್ಯಗಳನ್ನು ಗೆದ್ದಿದ್ದರೆ, ಜಿಂಬಾಬ್ವೆ 3 ಪಂದ್ಯಗಳನ್ನು ಗೆದ್ದಿದೆ. ಭಾರತ ಕಳೆದ ಐದು ಪಂದ್ಯಗಳನ್ನು ಸುಲಭವಾಗಿ ಗೆದ್ದಿದೆ. ಭಾರತ ಈಗ ಎರಡನೇ ಟಿ20ಐ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿದೆ.
ಎರಡನೇ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ/ ಪ್ರಭ್‌ಸಿಮ್ರಾನ್ ಸಿಂಗ್, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಅಶೋಕ್ ಶರ್ಮಾ, ಮಾಯಾಂಕ್ ಯಾದವ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
