
ಹರಾರೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ. ಆರಂಭಿಕರಿಬ್ಬರು 3ನೇ ಓವರ್ ಮುಗಿಯುವುದಕ್ಕೂ ಮುನ್ನವೇ ಪೆವಿಲಿಯನ್ ಸೇರಿಕೊಂಡಿದ್ದಾರೆ(PC-BCCI).

ಆರಂಭಿಕ ಅಭಿಷೇಕ್ ಶರ್ಮಾ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿ 8 ರನ್ಗಳಿಗೆ ವಿಕೆಟ್ ಒಪ್ಪಿಸಿದರೆ, ಕಳೆದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ವೈಭವ್ ಸೂರ್ಯವಂಶಿ ಕೂಡ ಈ ಪಂದ್ಯದಲ್ಲಿ ಬಹುಬೇಗನೇ ವಿಕೆಟ್ ಕಳೆದುಕೊಂಡರು. ಹೀಗಾಗಿ ಟೀಂ ಇಂಡಿಯಾ ಕೇವಲ 29 ರನ್ಗಳಿಗೆ ತನ್ನ ಆರಂಭಿಕರಿಬ್ಬರನ್ನು ಕಳೆದುಕೊಂಡಿತು(PC-BCCI).

ಈ ಪಂದ್ಯದಲ್ಲಿ ಸಿಂಗಲ್ ತೆಗೆದುಕೊಳ್ಳುವ ಮೂಲಕ ತಮ್ಮ ಇನ್ನಿಂಗ್ಸ್ ಆರಂಭಿಸಿದ ವೈಭವ್, ರಿಚರ್ಡ್ ನಗರ್ವಾ ಬೌಲ್ ಮಾಡಿದ ಇನ್ನಿಂಗ್ಸ್ನ 4ನೇ ಓವರ್ನಲ್ಲಿ ಸತತ ಬೌಂಡರಿಗಳ ಮಳೆಗರೆದರು. ಈ ಓವರ್ನಲ್ಲಿ ಮೂರು ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದ ವೈಭವ್ ಕೊನೆಯ ಎಸೆತದಲ್ಲಿ ಮತ್ತದೇ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿದರು(PC-BCCI).

ಈ ಪಂದ್ಯದಲ್ಲಿ ವೈಭವ್ 9 ಎಸೆತಗಳನ್ನು ಎದುರಿಸಿ 3 ಬೌಂಡರಿ ಮತ್ತು 1 ಸಿಕ್ಸರ್ ಸೇರಿದಂತೆ 20 ರನ್ ಗಳಿಸಿ ಔಟಾದರು. ಮೊದಲ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ವೈಭವ್ ಕೇವಲ 18 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ಗಳ ಇನ್ನಿಂಗ್ಸ್ ಆಡಿದ್ದರು. ಈ ಮೂಲಕ ದಾಖಲೆಯನ್ನು ನಿರ್ಮಿಸಿದ್ದರು. ಆದರೆ ಈ ಪಂದ್ಯದಲ್ಲಿ ಮತ್ತೊಮ್ಮೆ ಮಿಂಚಲು ವೈಭವ್ಗೆ ಸಾಧ್ಯವಾಗಲಿಲ್ಲ(PC-BCCI).

ಪಂದ್ಯದ ವಿಚಾರಕ್ಕೆ ಬರುವುದಾದರೆ.. ಆರಂಭಿಕ ಆಘಾತದ ನಡುವೆಯೂ ಟೀಂ ಇಂಡಿಯಾ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ಟೀಂ ಇಂಡಿಯಾ ಇನ್ನಿಂಗ್ಸ್ನ 10 ಓವರ್ಗಳು ಪೂರ್ಣಗೊಂಡಿದ್ದು, ಪ್ರಮುಖ 3 ವಿಕೆಟ್ಗಳನ್ನು ಕಳೆದುಕೊಂಡು 95 ರನ್ ಕಲೆಹಾಕಿದೆ(PC-BCCI).
Published On – 5:21 pm, Sat, 25 July 26