ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ 2026 ರ 10 ನೇ ಪಂದ್ಯದಲ್ಲಿ ಭಾರತ ತಂಡ, ನೆದರ್ಲ್ಯಾಂಡ್ಸ್ ತಂಡವನ್ನು 95 ರನ್‌ಗಳಿಂದ ಸೋಲಿಸಿತು. ಈ ಮೂಲಕ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ರನ್‌ಗಳ ವಿಷಯದಲ್ಲಿ ಅತಿದೊಡ್ಡ ಗೆಲುವು ದಾಖಲಿಸಿದ ದಾಖಲೆಯನ್ನು ಸೃಷ್ಟಿಸಿತು. ಈ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 209 ರನ್ ಗಳಿಸಿತು. 210 ರನ್‌ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ 114 ರನ್ಗಳಿಗೆ ಆಲೌಟ್ ಆಯಿತು. ತಂಡದ ಪರ ಶ್ರೀ ಚರಣಿ ನಾಲ್ಕು ವಿಕೆಟ್ ಪಡೆದರೆ, ಶಫಾಲಿ ವರ್ಮಾ ಮೂರು ವಿಕೆಟ್ ಪಡೆದರು. ಭಾರತ ಸತತ ಎರಡನೇ ಪಂದ್ಯವನ್ನು ಗೆದ್ದು ಗ್ರೂಪ್ ಎ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.