ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳು ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದ ನಂತರ ಭಾರತೀಯ ಮಹಿಳಾ ತಂಡ ಮೈದಾನಕ್ಕಿಳಿಯುತ್ತಿರುವುದು ಇದೇ ಮೊದಲು. ಹೀಗಾಗಿ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಉಭಯ ತಂಡಗಳ ನಡುವಿನ ಈ ಮೊದಲ ಪಂದ್ಯ ವಿಶಾಖಪಟ್ಟಣಂನಲ್ಲಿರುವ ACA-VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ ಭಾರತೀಯ ಮಹಿಳಾ ತಂಡವು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ಗೆ ತನ್ನ ಔಪಚಾರಿಕವಾಗಿ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.