ತಿರುವನಂತಪುರಂನಲ್ಲಿ ನಡೆದ ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ನಾಲ್ಕನೇ ಟಿ20ಪಂದ್ಯವನ್ನು ಆತಿಥೇಯ ಭಾರತ ತಂಡ 30 ರನ್ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 4-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಬ್ಬರ ಅರ್ಧಶತಕದ ನೆರವಿನಿಂದ 221 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ 191 ರನ್ ಕಲೆಹಾಕಲಷ್ಟೇ ಶಕ್ತವಾಗಿ ಸತತ 4ನೇ ಸೋಲಿಗೆ ಕೊರಳೊಡ್ಡಿತು.