IPL 2026:ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ ಎದುರಾಳಿ ಯಾರು? ಪಂದ್ಯ ಯಾವಾಗ? – Kannada News | RCB vs GT Qualifier 1 IPL 2026: Date, Venue, Live Stream – All You Need to Know

ಐಪಿಎಲ್ 2026 (IPL 2026) ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರನ್​ಗಳಿಂದ ಸೋತ ಆರ್​ಸಿಬಿ (SRH vs RCB) ಸೋಲಿನೊಂದಿಗೆ ಲೀಗ್ ಹಂತವನ್ನು ಮುಗಿಸಿತು. ಈ ಸೋಲಿನ ಹೊರತಾಗಿಯೂ ರಜತ್ ಪಾಟಿದರ್ ಪಡೆ ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಆರ್​ಸಿಬಿ ಕ್ವಾಲಿಫೈಯರ್ 1 ಆಡುವುದಕ್ಕೆ ಅರ್ಹತೆಯನ್ನು ಪಡೆದುಕೊಂಡಿತು. ಈ ಮೂಲಕ ಸತತ ಎರಡನೇ ಆವೃತ್ತಿಯಲ್ಲಿ ಆರ್​ಸಿಬಿ ಕ್ವಾಲಿಫೈಯರ್ 1 ಆಡಲಿದೆ. ಕಳೆದ ಆವೃತ್ತಿಯಲ್ಲಿ ಎರಡನೇ ಸ್ಥಾನ ಪಡೆದು ಕ್ವಾಲಿಫೈಯರ್ 1ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಆರ್​ಸಿಬಿ ಫೈನಲ್​ಗೇರಿತ್ತು. ಈ ಬಾರಿ ಆರ್​ಸಿಬಿಗೆ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ (GT) ತಂಡ ಎದುರಾಗಲಿದೆ.

ಅಂಕಪಟ್ಟಿಯಲ್ಲಿ ಸ್ಥಾನ

ಲೀಗ್ ಹಂತದಲ್ಲಿ ಆರ್​ಸಿಬಿ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿತು. +0.783 ನೆಟ್ ರನ್​ರೇಟ್ ಹೊಂದಿರುವ ಆರ್​ಸಿಬಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಕೂಡ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದೆ. ಆದರೆ ಗುಜರಾತ್ ತಂಡದ ನೆಟ್ ರನ್​ರೇಟ್ ಆರ್​ಸಿಬಿಗಿಂತ ಕಡಿಮೆ ಅಂದರೆ +0.695 ಆಗಿರುವ ಕಾರಣ ಎರಡನೇ ಸ್ಥಾನವನ್ನು ಪಡೆದುಕೊಂಡಿತು.

ಮೂರನೇ ಪಂದ್ಯದಲ್ಲಿ ಯಾರಿಗೆ ಗೆಲುವು?

ಇನ್ನು ಲೀಗ್ ಹಂತದಲ್ಲಿ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆದ್ದರೆ, ಎರಡನೇ ಮುಖಾಮುಖಿಯಲ್ಲಿ ಗುಜರಾತ್ ಗೆಲುವು ಸಾಧಿಸಿತ್ತು. ಹೀಗಾಗಿ ಮೂರನೇ ಮುಖಾಮುಖಿಯಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಉಭಯ ತಂಡಗಳು ಕ್ವಾಲಿಫೈಯರ್ 1 ಗೆ ಅರ್ಹತೆ ಪಡೆದಿರುವ ಕಾರಣ ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೇರಿದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಲಿದೆ. ಅಂದರೆ ಸೋತ ತಂಡಕ್ಕೆ ಫೈನಲ್​ಗೇರಲು ಮತ್ತೊಂದು ಅವಕಾಶ ಸಿಗಲಿದೆ.

SRH vs RCB IPL 2026 Highlights: ಸನ್​ರೈಸರ್ಸ್​ ವಿರುದ್ಧ 55 ರನ್​ಗಳಿಂದ ಸೋತ ಆರ್​ಸಿಬಿ

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಮೇ 26 ರ ಮಂಗಳವಾರದಂದು ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣ, ಧರ್ಮಶಾಲಾದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಎಷ್ಟು ಗಂಟೆಗೆ ಆರಂಭ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಪಂದ್ಯದ ಟಾಸ್ 6:30ಕ್ಕೆ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯವನ್ನು ವೀಕ್ಷಿಸುವುದು ಹೇಗೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಇಷ್ಟಪಡುವ ವೀಕ್ಷಕರಿಗೆ, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:49 pm, Fri, 22 May 26

Source link

Leave a Reply

Your email address will not be published. Required fields are marked *