ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಓಪನರ್ ವೈಭವ್ ಸೂರ್ಯವಂಶಿ ಬೌಂಡರಿ ಮತ್ತು ಸಿಕ್ಸರ್ಗಳ ಮಳೆಗರೆದರು. ಈ ಮೂಲಕ ಐಪಿಎಲ್ನಲ್ಲಿ ಅಭಿಷೇಕ್ ಶರ್ಮಾ ನಿರ್ಮಿಸಿದ್ದ ದಾಖಲೆಯೊಂದನ್ನು ಸಹ ಮುರಿದಿದ್ದಾರೆ. ವೈಭವ್ ಸೂರ್ಯವಂಶಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 21 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್ಗಳ ಸಹಿತ 46 ರನ್ ಬಾರಿಸಿದರು.
ಈ ಪಂದ್ಯದಲ್ಲಿ ಮೂರು ಸಿಕ್ಸರ್ಗಳನ್ನು ಬಾರಿಸುವ ಮೂಲಕ ಒಂದು ಆವೃತ್ತಿಯಲ್ಲಿ ಅಧಿಕ ಸಿಕ್ಸರ್ಗಳನ್ನು ಬಾರಿಸಿದ ದಾಖಲೆ ವೈಭವ್ ಪಾಲಾಗಿದೆ. ಪ್ರಸ್ತುತ ವೈಭವ್ 43 ಸಿಕ್ಸರ್ಗಳನ್ನು ಬಾರಿಸಿದ್ದಾರೆ. ಈ ಹಿಂದೆ ಒಂದು ಆವೃತ್ತಿಯಲ್ಲಿ 42 ಸಿಕ್ಸರ್ಗಳನ್ನು ಬಾರಿಸಿದ್ದ ಅಭಿಷೇಕ್ ಶರ್ಮಾ ಅವರ ದಾಖಲೆಯನ್ನು ವೈಭವ್ ಮುರಿದಿದ್ದಾರೆ. 2024 ರ ಆವೃತ್ತಿಯಲ್ಲಿ ಈ ದಾಖಲೆ ನಿರ್ಮಿಸಿದ್ದ ಅಭಿಷೇಕ್, ವಿರಾಟ್ ಕೊಹ್ಲಿ (38) ಅವರ ದಾಖಲೆಯನ್ನು ಮುರಿದಿದ್ದರು. ಇದೀಗ ಈ ಆವೃತ್ತಿಯಲ್ಲೂ ಅಭಿಷೇಕ್ 37 ಸಿಕ್ಸರ್ಗಳನ್ನು ಬಾರಿಸಿದ್ದು ವೈಭವ್ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದಾರೆ.