IPL 2026: ಐಪಿಎಲ್‌ನಲ್ಲಿ ಇದುವರೆಗೆ ಯಾರು ಮಾಡಿರದ ದಾಖಲೆಯ ಸನಿಹದಲ್ಲಿ ವಿರಾಟ್ ಕೊಹ್ಲಿ – Kannada News | Virat Kohli: IPL 9000 Runs Record Awaits vs GT at Chinnaswamy

ಐಪಿಎಲ್​ನ ಮೊದಲ ಆವೃತ್ತಿಯಿಂದಲೂ ಆಡುತ್ತಿರುವ ವಿರಾಟ್ ಕೊಹ್ಲಿ ಈ ಲೀಗ್​ನಲ್ಲಿ ನೂರಾರು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಕೊಹ್ಲಿ ಆಟಕ್ಕೆ ಮುರಿಯದ ದಾಖಲೆಗಳಿಲ್ಲ. ಪ್ರತಿ ಆವೃತ್ತಿಯಲ್ಲೂ ಕೊಹ್ಲಿ ಒಂದಿಲ್ಲೊಂದು ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅದರಂತೆ ಐಪಿಎಲ್‌ 2026 ರಲ್ಲೂ ಕೊಹ್ಲಿಯ ದಾಖಲೆಗಳ ಪುಸ್ತಕಕ್ಕೆ ಮತ್ತೊಂದು ದಾಖಲೆ ಸೇರುವ ಸನಿಹದಲ್ಲಿದೆ.

ಏಪ್ರಿಲ್ 24 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ತಮ್ಮ ಮುಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ದಾಖಲೆ ನಿರ್ಮಿಸುವ ಅವಕಾಶವನ್ನು ಹೊಂದಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ಇಲ್ಲಿಯವರೆಗೆ ಯಾವುದೇ ಆಟಗಾರನಿಗೂ ಈ ದಾಖಲೆಯನ್ನು ಸೃಷ್ಟಿಸಲಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ.

ಏಪ್ರಿಲ್ 24 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ವಿರಾಟ್ ಕೊಹ್ಲಿ 92 ರನ್ ಗಳಿಸಿದರೆ, ಐಪಿಎಲ್ ಇತಿಹಾಸದಲ್ಲಿ 9000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ವಿಶ್ವದ ಯಾವುದೇ ಬ್ಯಾಟ್ಸ್‌ಮನ್ ಈ ಬೃಹತ್ ದಾಖಲೆಯ ಹತ್ತಿರಕ್ಕೂ ಬಂದಿಲ್ಲ. ಕೊಹ್ಲಿ ಈ ಸಾಧನೆ ಮಾಡಿದರೆ, ಐಪಿಎಲ್ ಟಿ20 ಲೀಗ್ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯವನ್ನು ಬರೆಯುತ್ತಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಇದುವರೆಗೆ 273 ಐಪಿಎಲ್ ಪಂದ್ಯಗಳನ್ನು ಆಡಿದ್ದು, 39.76 ರ ಸರಾಸರಿಯಲ್ಲಿ 8908 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ಇದುವರೆಗೆ 276 ಪಂದ್ಯಗಳಲ್ಲಿ 29.92 ರ ಸರಾಸರಿಯಲ್ಲಿ 7183 ರನ್ ಗಳಿಸಿದ್ದಾರೆ.

2026ರ ಐಪಿಎಲ್​ನಲ್ಲಿ ಇಲ್ಲಿಯವರೆಗೆ ಆಡಿರುವ 6 ಪಂದ್ಯಗಳಲ್ಲಿ ಕೊಹ್ಲಿ ಎರಡು ಅರ್ಧಶತಕಗಳ ಸಹಾಯದಿಂದ 49.40 ರ ಸರಾಸರಿಯಲ್ಲಿ 247 ರನ್ ಗಳಿಸಿದ್ದಾರೆ. ಕೊಹ್ಲಿ ಈ ಆಟದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಸ್ತುತ ಆಡಿರುವ ಆರು ಪಂದ್ಯಗಳಿಂದ ನಾಲ್ಕು ಗೆಲುವು ಮತ್ತು ಎರಡು ಸೋಲುಗಳೊಂದಿಗೆ ಎಂಟು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ತಂಡದ ನೆಟ್ ರನ್​ ರೇಟ್ +1.121. ಆದಾಗ್ಯೂ, ಮುಂದಿನ ಪಂದ್ಯದಲ್ಲಿ ಕೊಹ್ಲಿ ಅಪರೂಪದ ದಾಖಲೆಯನ್ನು ಮುರಿಯುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ.

Published On – 4:24 pm, Tue, 21 April 26

Source link

Leave a Reply

Your email address will not be published. Required fields are marked *