IPL 2026: ತನ್ನ ಬಗ್ಗೆ ಹರಡಿದ್ದ ವದಂತಿಯ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ

IPL 2026: ತನ್ನ ಬಗ್ಗೆ ಹರಡಿದ್ದ ವದಂತಿಯ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ

ಮಡದಿ ಮಕ್ಕಳೊಂದಿಗೆ ಲಂಡನ್​ನಲ್ಲಿ ನೆಲೆಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಯಾವುದಾದರೂ ಸರಣಿಗಳಿದ್ದಾಗ ಮಾತ್ರ ಭಾರತಕ್ಕೆ ಬರುತ್ತಾರೆ. ಉಳಿದಂತೆ ಕೊಹ್ಲಿ ಲಂಡನ್​ನಲ್ಲಿಯೇ ಇರುತ್ತಾರೆ. ಇದೀಗ 2026 ರ ಐಪಿಎಲ್ ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಇದರ ಸಲುವಾಗಿ ವಿರಾಟ್ ಕೊಹ್ಲಿ ತಮ್ಮ ಮಡದಿ ಅನುಷ್ಕಾ ಶರ್ಮಾ ಅವರೊಂದಿಗೆ ಕೆಲವು ದಿನಗಳ ಹಿಂದೆ ಭಾರತಕ್ಕೆ ಬಂದಿಳಿದಿದ್ದರು. ಆ ಬಳಿಕ ಆರ್​ಸಿಬಿ ತಂಡವನ್ನು ಕೂಡಿಕೊಂಡಿರುವ ಕೊಹ್ಲಿ, ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದೆಲ್ಲದರ ನಡುವೆ ವಿರಾಟ್ ಕೊಹ್ಲಿಗೆ ಸಂಬಂಧಿಸಿದ ವದಂತಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ವದಂತಿ ಗಾಳಿಯಂತೆ ಹಬ್ಬುತ್ತಿರುವುದನ್ನು ಗಮನಿಸಿದ ಕೊಹ್ಲಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ವದಂತಿ ಬಗ್ಗೆ ಕೊಹ್ಲಿ ಸ್ಪಷ್ಟನೆ

ವಾಸ್ತವವಾಗಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿ ಏನೆಂದರೆ.. ವಿರಾಟ್ ಕೊಹ್ಲಿ ಭಾರತದಿಂದ ಲಂಡನ್‌ಗೆ ಪ್ರಯಾಣಿಸಲು ಆರ್‌ಸಿಬಿ ಆಡಳಿತ ಮಂಡಳಿಯಿಂದ ಚಾರ್ಟರ್ಡ್ ವಿಮಾನದ ಬೇಡಿಕೆ ಇಟ್ಟಿದ್ದಾರೆ. ಇದರ ಜೊತೆಗೆ ಆರ್‌ಸಿಬಿ ಪಂದ್ಯಗಳ ನಡುವೆ ಮೂರು ದಿನಗಳ ಅಂತರವಿದ್ದರೆ, ಆ ಚಾರ್ಟರ್ಡ್​ ವಿಮಾನದಲ್ಲಿ ಭಾರತದಿಂದ ಲಂಡನ್​ಗೆ ತೆರಳಿ, ಪಂದ್ಯದ ಹಿಂದಿನ ದಿನ ಲಂಡನ್​ನಿಂದ ಭಾರತಕ್ಕೆ ಹಿಂದಿರುಗಿ ತಂಡವನ್ನು ಕೂಡಿಕೊಳ್ಳುವ ಸಲುವಾಗಿ ಕೊಹ್ಲಿ ಈ ಬೇಡಿಕೆಯನ್ನು ಆರ್​​ಸಿಬಿ ಆಡಳಿತ ಮಂಡಳಿ ಮುಂದಿಟ್ಟಿದ್ದಾರೆ ಎಂಬುದಾಗಿತ್ತು.

ವದಂತಿಯನ್ನು ತಳ್ಳಿಹಾಕಿದ ಕೊಹ್ಲಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿಯನ್ನು ವಿರಾಟ್ ಕೊಹ್ಲಿ ನಿರಾಕರಿಸಿದ್ದು, ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ವೈರಲ್ ಪೋಸ್ಟ್ ಅನ್ನು ಹಂಚಿಕೊಂಡು, ಎರಡು ನಗುವ ಎಮೋಜಿಗಳನ್ನು ಸೇರಿಸಿ ಪೋಸ್ಟ್ ಮಾಡಿದ್ದಾರೆ. ಇದರರ್ಥ, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಸುದ್ದಿ ಶುದ್ಧ ಸುಳ್ಳು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಎಂಬುದನ್ನು ಅರಿಯಬಹುದಾಗಿದೆ.

ಭರ್ಜರಿ ತಯಾರಿಯಲ್ಲಿ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ 2026 ಕ್ಕೆ ತಯಾರಿ ನಡೆಸುತ್ತಿದ್ದಾರೆ. ಅವರು ಕಳೆದ ವಾರವಷ್ಟೇ ಆರ್‌ಸಿಬಿ ಶಿಬಿರಕ್ಕೆ ಸೇರಿದ್ದರು. ಆರ್‌ಸಿಬಿ ತರಬೇತಿ ಶಿಬಿರದಲ್ಲಿ ವಿರಾಟ್ ಕೊಹ್ಲಿ ಅಭ್ಯಾಸ ಮಾಡುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿಯೂ ಹರಿದಾಡುತ್ತಿವೆ. ಕೆಲವು ವೀಡಿಯೊಗಳಲ್ಲಿ ವಿರಾಟ್ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂದರೆ, ಇನ್ನು ಕೆಲವು ವೀಡಿಯೊಗಳಲ್ಲಿ ಅವರು ಆರ್‌ಸಿಬಿ ಆಟಗಾರರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿರುವುದು ಕಂಡುಬರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *