ಐಪಿಎಲ್ 2026 ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಹೀಗಾಗಿ ಈ ಪಂದ್ಯ ಆರ್ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲ ತವರು ಮೈದಾನವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5 ಪಂದ್ಯಗಳನ್ನು ಆಡಲಿದ್ದು, ಎರಡನೇ ತವರು ಮೈದಾನದ ರಾಯ್ಪುರದಲ್ಲಿ ಉಳಿದ ಎರಡು ಪಂದ್ಯಗಳನ್ನು ಆಡಲಿದೆ. ಹಾಗಾಗಿ ಬೆಂಗಳೂರಿನಲ್ಲಿ ಆರ್ಸಿಬಿಗೆ ನಾಳಿನ ಪಂದ್ಯ ಕೊನೆಯ ಲೀಗ್ ಪಂದ್ಯವಾಗಲಿದೆ.
ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಯಾವಾಗ ನಡೆಯಲಿದೆ?
ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಏಪ್ರಿಲ್ 24 ರಂದು ನಡೆಯಲಿದೆ.
ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ?
ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಸಂಜೆ 7:30 ಕ್ಕೆ ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.
ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ವಿವಿದ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಹಾಟ್ ಸ್ಟಾರ್ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಉಭಯ ತಂಡಗಳು
ಆರ್ಸಿಬಿ ಪೂರ್ಣ ತಂಡ: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ,
ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
