2026 ರ ಐಪಿಎಲ್ ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಎಲ್ಲಿ ಆಡಲಿದೆ ಎಂಬುದು ಇದುವರೆಗು ಖಚಿತವಾಗಿರಲಿಲ್ಲ. ಇದಕ್ಕೆ ಕಾರಣ ಆರ್ಸಿಬಿ ಫ್ರಾಂಚೈಸಿ ಹಾಗೂ ರಾಜ್ಯ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ. ಇದೀಗ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಂಡಿರುವಂತೆ ಕಾಣುತ್ತಿದ್ದು, ಆರ್ಸಿಬಿ ತಂಡ ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಇಂದು ನಡೆದ ಸಚಿವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸರ್ಕಾರದ ಈ ನಿರ್ಧಾರ ಆರ್ಸಿಬಿ ಅಭಿಮಾನಿಗಳನ್ನು ಸಂತಸದ ಅಲೆಯಲ್ಲಿ ಮಿಂದೇಳುವಂತೆ ಮಾಡಿದೆ.