IPL 2026: ಮುಂಬೈ ವಿರುದ್ಧ ಹೀನಾಯವಾಗಿ ಸೋತು ಬೆಂಗಳೂರಿಗೆ ಬಂದ ಗುಜರಾತ್ – Kannada News | IPL 2026: RCB vs GT Match Preview Date, Venue, Time, Squads and Live Stream Info

ಸತತ ನಾಲ್ಕು ಪಂದ್ಯಗಳಲ್ಲಿ ಸೋತ ನಂತರ, ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಂತಿಮವಾಗಿ ಗೆಲುವಿನ ರುಚಿ ನೋಡಿತು. ಐಪಿಎಲ್ 2026 (IPL 2026) ರ ಮೊದಲ ಪಂದ್ಯವನ್ನು ಗೆದ್ದ ನಂತರ ಸತತ ಸೋಲುಗಳನ್ನು ಎದುರಿಸುತ್ತಿದ್ದ ಮುಂಬೈ, ಏಕಪಕ್ಷೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡವನ್ನು 99 ರನ್‌ಗಳಿಂದ ಸೋಲಿಸಿತು. ಇತ್ತ ಮೊದಲ ಎರಡು ಪಂದ್ಯಗಳನ್ನು ಸೋತು, ಆ ನಂತರ ಹ್ಯಾಟ್ರಿಕ್ ಜಯ ಸಾಧಿಸಿದ್ದ ಗುಜರಾತ್, ತನ್ನ ಆರನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ತನ್ನ ತವರು ಮೈದಾನದಲ್ಲಿ ಭಾರಿ ಅಂತರದ ಸೋಲು ಕಂಡಿರುವ ಗುಜರಾತ್ ಇದೀಗ ತನ್ನ 7ನೇ ಪಂದ್ಯವನ್ನಾಡಲು ತವರನ್ನು ತೊರೆಯುತ್ತಿದೆ. ಹಾಗಿದ್ದರೆ ಗುಜರಾತ್ ತನ್ನ 7ನೇ ಪಂದ್ಯವನ್ನು ಯಾವಾಗ, ಎಲ್ಲಿ, ಯಾರ ವಿರುದ್ಧ ಆಡಲಿದೆ ಎಂಬುದನ್ನು ನೋಡುವುದಾದರೆ..

ಗುಜರಾತ್ ಟೈಟಾನ್ಸ್ ತಂಡದ 7ನೇ ಪಂದ್ಯ ಯಾವ ತಂಡದ ವಿರುದ್ಧ ನಡೆಯಲಿದೆ?

ಗುಜರಾತ್ ಟೈಟಾನ್ಸ್ ತಂಡದ 7ನೇ ಪಂದ್ಯ ಆರ್​ಸಿಬಿ ವಿರುದ್ಧ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಏಪ್ರಿಲ್ 24 ರಂದು ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯ ಸಂಜೆ 7:30 ಕ್ಕೆ ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಹಾಟ್ ಸ್ಟಾರ್​​ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

SRH vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

ಉಭಯ ತಂಡಗಳು

ಆರ್​ಸಿಬಿ ಪೂರ್ಣ ತಂಡ: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್​ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ,

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.’

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *