IPL 2026: ಸೂಕ್ತ ಕಾರಣ ನೀಡಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ಬಿಸಿಸಿಐ

IPL 2026: ಸೂಕ್ತ ಕಾರಣ ನೀಡಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ಬಿಸಿಸಿಐ

2026 ರ ಐಪಿಎಲ್‌ ಆರಂಭಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದೆ. ಮಾರ್ಚ್​ 28 ರಂದು ಲೀಗ್​ನ ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಸಂಜೆ 7:30 ರಿಂದ ಆರಂಭವಾಗಲಿದೆ. ಆದಾಗ್ಯೂ ಪ್ರತಿ ಆವೃತ್ತಿಯ ಮೊದಲ ಪಂದ್ಯ ನಡೆಯುವುದಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಆವೃತ್ತಿಯಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ.

ಬಿಸಿಸಿಐನ ಈ ನಿರ್ಧಾರದ ಹಿಂದೆ ಸೂಕ್ತ ಕಾರಣವೂ ಇದೆ. ವಾಸ್ತವವಾಗಿ ಕಳೆದ ವರ್ಷ ಬೆಂಗಳೂರಿನಲ್ಲಿ ಆರ್‌ಸಿಬಿಯ ವಿಜಯೋತ್ಸವದ ಮೆರವಣಿಗೆಯ ವೇಳೆ ಕಾಲ್ತುಳಿತ ಉಂಟಾಗಿ 11 ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಹೀಗಾಗಿ ಆ ಅವಘಡದಲ್ಲಿ ಮಡಿದವರ ಗೌರವಾರ್ಥವಾಗಿ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ

ಮೇಲೆ ಹೇಳಿದಂತೆ ಈ ಬಾರಿಯ ಐಪಿಎಲ್ ಮಾರ್ಚ್ 28 ರಂದು ಆರಂಭವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಐಪಿಎಲ್ 2026 ರ ಮೊದಲ ಪಂದ್ಯಕ್ಕೂ ಮುನ್ನ ಬಿಸಿಸಿಐ ಉದ್ಘಾಟನಾ ಸಮಾರಂಭವನ್ನು ಆಯೋಜಿಸದಿರಲು ಇದು ಪ್ರಮುಖ ಕಾರಣವಾಗಿದೆ.

ಉದ್ಘಾಟನಾ ಸಮಾರಂಭ ಏಕೆ ಇರುವುದಿಲ್ಲ?

ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹೀಗಾಗಿ ಜೂನ್ 4, 2025 ರಂದು ನಡೆದಿದ್ದ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ11 ಜನರು ಸಾವನ್ನಪ್ಪಿದರು. ಈ ಕಾರಣದಿಂದಾಗಿ ಈ ಆವೃತ್ತಿಯ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಆದಾಗ್ಯೂ, ಈ ಐಪಿಎಲ್‌ನ ಸಮಾರೋಪ ಸಮಾರಂಭವನ್ನು ಮೇ 31 ರಂದು ನಡೆಸಬಹುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವ್‌ಜಿತ್ ಸೈಕಿಯಾ ಹೇಳಿರುವುದಾಗಿ TOI ಉಲ್ಲೇಖಿಸಿದೆ.

ಈ ಹಿಂದೆಯೂ ರದ್ದುಗೊಳಿಸಲಾಗಿತ್ತು

ಕಳೆದ ಆವೃತ್ತಿಯ ಐಪಿಎಲ್ ಉದ್ಘಾಟನಾ ಸಮಾರಂಭವು ಕೋಲ್ಕತ್ತಾದಲ್ಲಿ ನಡೆದಿತ್ತು. ಇದರಲ್ಲಿ ಶಾರುಖ್ ಖಾನ್, ಶ್ರೇಯಾ ಘೋಷಾಲ್, ದಿಶಾ ಪಟಾನಿ ಮತ್ತು ಕರಣ್ ಔಜ್ಲಾ ಅವರಂತಹ ಕಲಾವಿದರು ಪ್ರದರ್ಶನ ನೀಡಿದ್ದರು. ಆದಾಗ್ಯೂ ಐಪಿಎಲ್ ಉದ್ಘಾಟನಾ ಸಮಾರಂಭ ರದ್ದಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್‌ಪಿಎಫ್ ಸೈನಿಕರ ಸ್ಮರಣಾರ್ಥ ಐಪಿಎಲ್ 2019 ರ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ನಿಗದಿಪಡಿಸಿದ ಹಣವನ್ನು ಹುತಾತ್ಮರ ಕುಟುಂಬಗಳಿಗೆ ವಿತರಿಸಲಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *