IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ (MS Dhoni) ಐಪಿಎಲ್ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ.
ಎಂ.ಎಸ್. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಈ ಕಾರಣದಿಂದ ಐಪಿಎಲ್ನ ಮೊದಲ ಎರಡು ವಾರಗಳ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಗಳಿಗೆ ಧೋನಿ ಅಲಭ್ಯರಾಗುವುದು ಬಹುತೇಕ ಖಚಿತ.
ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಎರಡು ದಿನಗಳಿಂದ ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಅಭ್ಯಾಸ ನಡೆಸುತ್ತಿದ್ದು, ಹೀಗಾಗಿ ಅವರೇ ಕೀಪಿಂಗ್ ಗ್ಲೌಸ್ ತೊಡಲಿದ್ದಾರೆ ಎನ್ನಬಹುದು.
ಇನ್ನು ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಹೇಂದ್ರ ಸಿಂಗ್ ಧೋನಿ ಏಪ್ರಿಲ್ 19 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು. ಅಂದರೆ ಏಪ್ರಿಲ್ 15ರ ತನಕ ಧೋನಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಪಂದ್ಯಗಳಲ್ಲಿ 'ಥಲಾ' ವನ್ನು ಎದುರು ನೋಡುವಂತಿಲ್ಲ. ಇತ್ತ ಧೋನಿ ಹೊರಗುಳಿದರೆ ಸರ್ಫರಾಝ್ ಖಾನ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್.




