ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 25ನೇ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್ನಲ್ಲಿ ಮೂರನೇ ಗೆಲುವು ದಾಖಲಿಸಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಲೀಗ್ನಲ್ಲಿ ತನ್ನ ಮೊದಲ ಗೆಲುವಿಗಾಗಿ ಹಂಬಲಿಸುತ್ತಿರುವ ಕೆಕೆಆರ್ ತಂಡಕ್ಕೆ ಗೆಲುವು ಎಂಬುದು ಗಗನ ಕುಸುಮವಾದಂತ್ತಾಗಿದೆ. ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 180 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಗುಜರಾತ್ 5 ವಿಕೆಟ್ಗಳಿಂದ ಜಯದ ನಗೆ ಬೀರಿತು.